ಚನ್ನಗಿರಿ: ತಾಲ್ಲೂಕಿನ ದೇವರಹಳ್ಳಿ ಗ್ರಾಮದ ಬಳಿ ಬುಧವಾರ ಬೀರೂರು-ಸಮ್ಮಸಗಿ ರಾಜ್ಯ ಹೆದ್ದಾರಿ ಬದಿಯಲ್ಲಿ ನಿಂತಿದ್ದ ಲಾರಿಗೆ ಬೈಕ್ ಡಿಕ್ಕಿ ಹೊಡೆದು ಸವಾರ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.
ಗ್ರಾಮದ ರಂಗಸ್ವಾಮಿ (55) ಮೃತಪಟ್ಟವರು. ಬೈಕ್ ಹಿಂಬದಿಯಲ್ಲಿ ಕುಳಿತಿದ್ದ ಕೆಂಚಪ್ಪ ಅವರು ಗಂಭೀರವಾಗಿ ಗಾಯಗೊಂಡಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ದಾವಣಗೆರೆ ಆಸ್ಪತ್ರೆಗೆ ದಾಖಲಿಸಲಾಗಿದೆ.
ಗ್ರಾಮದ ಬಳಿ ಹೋಟೆಲ್‌ನಲ್ಲಿ ಊಟ ಮಾಡಲು ಲಾರಿಯನ್ನು ಹೆದ್ದಾರಿ ಬದಿ ನಿಲ್ಲಿಸಿ ಚಾಲಕ ಹೋಗಿದ್ದರು. ಆಗ ವೇಗವಾಗಿ ಬಂದ ಬೈಕ್ ಲಾರಿಗೆ ಡಿಕ್ಕಿ ಹೊಡೆದಿದೆ. ಚನ್ನಗಿರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.