
ದಾವಣಗೆರೆ: ತಾಲ್ಲೂಕಿನ ಬಿಸ್ಲೇರಿ ಗ್ರಾಮದ ಜಮೀನಿನಲ್ಲಿ ಸುಟ್ಟು ಭಸ್ಮವಾದ ಕಾರಿನಲ್ಲಿ ಬಿಜೆಪಿಯ ಮಾಜಿ ಕಾರ್ಪೊರೇಟರ್ ಚಂದ್ರಶೇಖರ ಸಂಕೋಳ್ (56) ಅವರ ಮೃತದೇಹದ ಅವಶೇಷ ಪತ್ತೆಯಾಗಿದೆ. ಅವರು ಆತ್ಮಹತ್ಯೆ ಮಾಡಿಕೊಂಡ ಶಂಕೆ ವ್ಯಕ್ತವಾಗಿದೆ.
ಶನಿವಾರ ರಾತ್ರಿ ಜಮೀನಿಗೆ ತೆರಳಿದ್ದ ಅವರು, ಭಾನುವಾರ ಬೆಳಿಗ್ಗೆ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಕಾರಿನೊಂದಿಗೆ ಮೃತದೇಹ ಸಂಪೂರ್ಣ ಭಸ್ಮವಾಗಿದ್ದು, ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಅನುಮಾನದಡಿ ಹದಡಿ ಠಾಣೆಯ ಪೊಲೀಸರು ತನಿಖೆ ಕೈಗೊಂಡಿದ್ದಾರೆ.
ಪಾಲಿಕೆಯ 43 ನೇ ವಾರ್ಡ್‌ನ ಸದಸ್ಯರಾಗಿದ್ದ ಚಂದ್ರಶೇಖರ್, ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದರು ಎನ್ನಲಾಗಿದೆ. ಸಾಲ ಮಾಡಿಕೊಂಡಿದ್ದರು. ಈ ವಿಚಾರವಾಗಿ ಕೌಟುಂಬಿಕ ಕಲಹ ಉಂಟಾಗಿತ್ತು. ಇದರಿಂದ ಮನನೊಂದ ಪುತ್ರ ನರೇಶ್ (22) ಹಾಗೂ ಪುತ್ರಿ ಪವಿತ್ರಾ (24) ಆತ್ಮಹತ್ಯೆಗೆ ಯತ್ನಿಸಿದ್ದರು. ಇಬ್ಬರನ್ನೂ ಆಸ್ಪತ್ರೆಗೆ ದಾಖಲಾಗಿಸಲಾಗಿತ್ತು. ಬಳಿಕ ಚಂದ್ರಶೇಖರ್ ಜಮೀನಿಗೆ ತೆರಳಿದ್ದರು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.