ADVERTISEMENT

ಪರೀಕ್ಷೆ ಎದುರಿಸಲು ಆತ್ಮವಿಶ್ವಾಸ ಅಗತ್ಯ: ಹಾವೀರ ಕರೆಣ್ಣನವರ

ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಮಹಾವೀರ ಕರೆಣ್ಣನವರ

​ಪ್ರಜಾವಾಣಿ ವಾರ್ತೆ
Published 3 ಫೆಬ್ರುವರಿ 2026, 2:29 IST
Last Updated 3 ಫೆಬ್ರುವರಿ 2026, 2:29 IST
ದಾವಣಗೆರೆಯ ಅಮೃತ ವಿದ್ಯಾಲಯದಲ್ಲಿ ಆಯೋಜಿಸಿದ್ದ ರಾಷ್ಟ್ರೀಯ ಹೆಣ್ಣುಮಕ್ಕಳ ದಿನಾಚರಣೆಯಲ್ಲಿ ನ್ಯಾಯಾಧೀಶ ಮಹಾವೀರ ಕರೆಣ್ಣವರ್ ಮಾತನಾಡಿದರು. ಪ್ರಾಂಶುಪಾಲರಾದ ಪ್ರತಿಭಾ ಎನ್, ಪೊಲೀಸ್ ಇನ್ಸ್‌ಪೆಕ್ಟರ್ ಶಿಲ್ಪಾ, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಕವಿತಾ ಟಿ.ಎನ್ ಇದ್ದಾರೆ –ಪ್ರಜಾವಾಣಿ ಚಿತ್ರ
ದಾವಣಗೆರೆಯ ಅಮೃತ ವಿದ್ಯಾಲಯದಲ್ಲಿ ಆಯೋಜಿಸಿದ್ದ ರಾಷ್ಟ್ರೀಯ ಹೆಣ್ಣುಮಕ್ಕಳ ದಿನಾಚರಣೆಯಲ್ಲಿ ನ್ಯಾಯಾಧೀಶ ಮಹಾವೀರ ಕರೆಣ್ಣವರ್ ಮಾತನಾಡಿದರು. ಪ್ರಾಂಶುಪಾಲರಾದ ಪ್ರತಿಭಾ ಎನ್, ಪೊಲೀಸ್ ಇನ್ಸ್‌ಪೆಕ್ಟರ್ ಶಿಲ್ಪಾ, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಕವಿತಾ ಟಿ.ಎನ್ ಇದ್ದಾರೆ –ಪ್ರಜಾವಾಣಿ ಚಿತ್ರ   

ದಾವಣಗೆರೆ: ವಿದ್ಯಾರ್ಥಿಗಳು ಪರೀಕ್ಷೆ ಬರೆಯುವಾಗ ಗೊಂದಲಕ್ಕೆ ಒಳಗಾಗಬಾರದು. ಆತ್ಮವಿಶ್ವಾಸದಿಂದ ಪರೀಕ್ಷೆ ಬರೆದರೆ ಯಶಸ್ಸು ಸಾಧ್ಯ ಎಂದು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಮಹಾವೀರ ಕರೆಣ್ಣನವರ ಅಭಿಪ್ರಾಯಪಟ್ಟರು.

ಇಲ್ಲಿನ ಅಮೃತ ವಿದ್ಯಾಲಯಂ ಶಾಲೆಯಲ್ಲಿ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಪೊಲೀಸ್ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಸಾರ್ವಜನಿಕ ಶಿಕ್ಷಣ ಇಲಾಖೆ ಮತ್ತು ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಸಹಯೋಗದಲ್ಲಿ ಸೋಮವಾರ ಆಯೋಜಿಸಿದ್ದ ‘ರಾಷ್ಟ್ರೀಯ ಹೆಣ್ಣು ಮಕ್ಕಳ ದಿನಾಚರಣೆ’ಯಲ್ಲಿ ಅವರು ಮಾತನಾಡಿದರು.

‘18 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳ ಮೇಲೆ ನಡೆಯುವ ದೈಹಿಕ, ಮಾನಸಿಕ ದೌರ್ಜನ್ಯಗಳನ್ನು ತಡೆಗಟ್ಟಲು ಪೋಕ್ಸೊ ಕಾಯ್ದೆ ಜಾರಿಗೆ ತರಲಾಗಿದೆ. ಸಾಮಾಜಿಕ ಜಾಲತಾಣಗಳ ಪ್ರಭಾವದಿಂದ ಬಾಲಕ–ಬಾಲಕಿಯರು ಪ್ರೀತಿ, ಪ್ರೇಮದಲ್ಲಿ ಬಿದ್ದು ವಿದ್ಯಾಭ್ಯಾಸದಲ್ಲಿ ಹಿಂದುಳಿಯುತ್ತಿದ್ದಾರೆ. ವಿದ್ಯಾರ್ಥಿಗಳು ವಿದ್ಯಾಭ್ಯಾಸದ ಕಡೆಗೆ ಗಮನ ಹರಿಸಬೇಕು. ಇಲ್ಲದಿದ್ದರೆ ಜೀವನದಲ್ಲಿ ಮುಂದೆ ಬರಲು ಸಾಧ್ಯವಾಗುವುದಿಲ್ಲ’ ಎಂದು ಹೇಳಿದರು.

ADVERTISEMENT

‘ಹೆಣ್ಣು ಮಕ್ಕಳನ್ನು ದುರ್ಬಲ ಎಂದು ಭಾವಿಸಬಾರದು. ಹೆಣ್ಣು ಮಕ್ಕಳು ಎಲ್ಲ ಕ್ಷೇತ್ರಗಳಲ್ಲಿ ಪಾಲ್ಗೊಳ್ಳುವಂತೆ ನೋಡಿಕೊಳ್ಳಬೇಕು. ಸಮಾಜದಲ್ಲಿ ಅವರಿಗೆ ಎಲ್ಲ ರೀತಿಯಲ್ಲೂ ಅವಕಾಶಗಳು ಸಿಗುವಂತೆ ನೋಡಿಕೊಳ್ಳಬೇಕು. ಇತ್ತೀಚಿನ ದಿನಗಳಲ್ಲಿ ಪೋಕ್ಸೊ ಪ್ರಕರಣಗಳು ಹೆಚ್ಚಾಗುತ್ತಿವೆ’ ಎಂದು ಕಳವಳ ವ್ಯಕ್ತಪಡಿಸಿದರು.

ಮಕ್ಕಳ ರಕ್ಷಣಾಧಿಕಾರಿ ಕವಿತಾ, ಪೊಲೀಸ್ ಇನ್‌ಸ್ಟೆಕ್ಟರ್‌ ಶಿಲ್ಪಾ, ಅಮೃತ ವಿದ್ಯಾಲಯಂ ಪ್ರಾಂಶುಪಾಲೆ ಪ್ರತಿಭಾ, ಗುರುಪ್ರಸಾದ್ ಹಾಜರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.