ADVERTISEMENT

ದಾವಣಗೆರೆ: ಅಂತರ ಮರೆತು ಹುಟ್ಟುಹಬ್ಬ ಆಚರಿಸಿಕೊಂಡ ಮೇಯರ್ ಅಜಯ್ ಕುಮಾರ್

​ಪ್ರಜಾವಾಣಿ ವಾರ್ತೆ
Published 5 ಜುಲೈ 2020, 9:57 IST
Last Updated 5 ಜುಲೈ 2020, 9:57 IST
ಪಾಲಿಕೆ ಆವರಣದೊಳಗೆ ಹುಟ್ಟುಹಬ್ಬ ಆಚರಿಸಿಕೊಂಡ ಮೇಯರ್ ಬಿ.ಜಿ. ಅಜಯ್‌ಕುಮಾರ್
ಪಾಲಿಕೆ ಆವರಣದೊಳಗೆ ಹುಟ್ಟುಹಬ್ಬ ಆಚರಿಸಿಕೊಂಡ ಮೇಯರ್ ಬಿ.ಜಿ. ಅಜಯ್‌ಕುಮಾರ್    

ದಾವಣಗೆರೆ: ಭಾನುವಾರದ ಲಾಕ್‌ಡೌನ್ ನಡುವೆಯೇ ಮಹಾನಗರ ಪಾಲಿಕೆ ಮೇಯರ್ ಬಿ.ಜಿ. ಅಜಯ್‌ಕುಮಾರ್ ಅವರು ಪಾಲಿಕೆ ಕಚೇರಿಯೊಳಗಡೆ ಜನ್ಮದಿನ ಆಚರಿಸಿಕೊಂಡಿರುವುದು ಚರ್ಚೆಗೆ ಗ್ರಾಸವಾಗಿದೆ.

ಅಂತರ ಕಾಯ್ದುಕೊಳ್ಳದೇ, ಮಾಸ್ಕ್ ಧರಿಸದೇ ಕಚೇರಿಯೊಳಗೆ ಹುಟ್ಟುಹಬ್ಬ ಆಚರಿಸಿಕೊಂಡಿರುವುದರಿಂದ ಸೋಂಕು ನಿಯಂತ್ರಣಕ್ಕೆ ತಮ್ಮದೇ ಸರ್ಕಾರ ರೂಪಿಸಿದ ನಿಯಮಗಳನ್ನು ಗಾಳಿಗೆ ತೂರಲಾಯಿತು.

ಪಾಲಿಕೆ ಕಚೇರಿ ಆವರಣದಲ್ಲಿ ಅಭಿಮಾನಿಗಳು ಹಾಗೂ ಪಾಲಿಕೆ ಸದಸ್ಯರು ಶುಭಾಶಯ ಮೇಯರ್ ಬಿ.ಜಿ. ಅಜಯ್‌ಕುಮಾರ್ ಅವರಿಗೆಕೋರಿದ್ದಾರೆ. ಆದರೆ ಯಾರೊಬ್ಬರೂ ಮಾಸ್ಕ್ ಧರಿಸಿಲ್ಲ ಎಂಬ ಆರೋಪ ಕೇಳಿಬಂದಿದೆ.

ADVERTISEMENT

ನಗರದ ವಿವಿಧ ಕಡೆ ಜನ್ಮದಿನಕ್ಕೆ ಶುಭಾಶಯ ಕೋರಿದ ಬ್ಯಾನರ್ ಹಾಗೂ ಕಟೌಟ್‌ಗಳು ರಾರಾಜಿಸುತ್ತಿದ್ದವು. ಹಾಗೆಯೇ ಪಾಲಿಕೆ ಆವರಣದಲ್ಲಿ ಹತ್ತಾರು ಕಾರುಗಳು ನಿಂತಿದ್ದು, ಹಲವರು ಬಂದು ಶುಭಾಶಯ ಕೋರಿದ್ದಾರೆ.

‘ಜನ್ಮದಿನ ಆಚರಿಸಿರುವುದು ನನ್ನ ಗಮನಕ್ಕೆ ಬಂದಿದೆ. ಸಂಬಂಧಿಸಿದ ಅಧಿಕಾರಿಗಳಿಂದ ಮಾಹಿತಿ ಪಡೆದು ಕಾಯ್ದೆ ಉಲ್ಲಂಘನೆಯಾಗಿದ್ದರೆ ಕ್ರಮ ಜರುಗಿಸಲಾಗುವುದು' ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹನುಮಂತರಾಯ ‘ಪ್ರಜಾವಾಣಿ’ಗೆ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.