ADVERTISEMENT

ವರ್ಷದೊಳಗೆ ತಾಂಡಾಗಳಾಗಲಿವೆ ಕಂದಾಯ ಗ್ರಾಮ: ಸಿಎಂ ಭರವಸೆ

​ಪ್ರಜಾವಾಣಿ ವಾರ್ತೆ
Published 14 ಫೆಬ್ರುವರಿ 2021, 13:20 IST
Last Updated 14 ಫೆಬ್ರುವರಿ 2021, 13:20 IST
ಬಿ.ಎಸ್‌.ಯಡಿಯೂರಪ್ಪ
ಬಿ.ಎಸ್‌.ಯಡಿಯೂರಪ್ಪ   

ಸೂರಗೊಂಡನಕೊಪ್ಪ (ನ್ಯಾಮತಿ): ಒಂದು ವರ್ಷದೊಳಗೆ ರಾಜ್ಯದ ಎಲ್ಲಾ ತಾಂಡಾಗಳನ್ನು ಕಂದಾಯ ಗ್ರಾಮಗಳನ್ನಾಗಿ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಭರವಸೆ ನೀಡಿದರು.
ಸೂರಗೊಂಡನಕೊಪ್ಪದಲ್ಲಿ ಭಾನುವಾರ ನಡೆದ ಸಂತ ಸೇವಾಲಾಲ್‌ ಅವರ 282ನೇ ಜಯಂತ್ಯುತ್ಸವವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ತಾಂಡಾಗಳನ್ನು ಕಂದಾಯ ಗ್ರಾಮಗಳನ್ನಾಗಿ ಮಾಡುವಂತೆ ಅಧಿಕಾರಿಗಳಿಗೆ ಸೂಚಿಸಿದ್ದೇನೆ. ಮುಂದಿನ ವರ್ಷ ಸೇವಾಲಾಲ್‌ ಜಯಂತಿಗೆ ಬರುವುದರೊಳಗೆ ಎಲ್ಲಾ ತಾಂಡಾಗಳನ್ನು ಕಂದಾಯ ಗ್ರಾಮಗಳನ್ನಾಗಿ ಮಾಡುತ್ತೇನೆ ಎಂದು ಹೇಳಿದರು.

₹ 50 ಕೋಟಿ ಅನುದಾನದಲ್ಲಿ ತಾಂಡಾ ಇಕೊ ವಿಲೇಜ್‌ಗಳನ್ನು ನಿರ್ಮಿಸುವ ಉದ್ದೇಶವಿದೆ ಎಂದು ಹೇಳಿದರು.
ಸಂತ ಸೇವಾಲಾಲ್ ಕ್ಷೇತ್ರ ಅಭಿವೃದ್ಧಿ ಮತ್ತು ನಿರ್ವಹಣಾ ಪ್ರತಿಷ್ಠಾನಕ್ಕೆ ₹ 10 ಕೋಟಿ ಅನುದಾನವನ್ನು ನೀಡಲಾಗುವುದು. ಚಿನ್ನಿಕಟ್ಟೆ ಗ್ರಾಮದಿಂದ ಸೂರಗೊಂಡನಕೊಪ್ಪ ಕ್ಷೇತ್ರದವರೆಗಿನ ರಸ್ತೆಯನ್ನು ಅಭಿವೃದ್ಧಿಗೊಳಿಸಲು ₹ 10 ಕೋಟಿ ಅನುದಾನ ನೀಡಲಾಗುವುದು ಎಂದು ಮುಖ್ಯಮಂತ್ರಿ ಘೋಷಿಸಿದರು.

ADVERTISEMENT

ಸೂರಗೊಂಡನಕೊಪ್ಪಕ್ಕೆ ಭಕ್ತರಿಗೆ ಬರಲು ಅನುಕೂಲ ಕಲ್ಪಿಸಲು ಭಾಯಾಗಡ್ ರೈಲು ನಿಲ್ದಾಣ ನಿರ್ಮಿಸುವಂತೆ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಲಾಗುವುದು ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.