ದಾವಣಗೆರೆ: ಮಧ್ಯಪ್ರಾಚ್ಯದ ಕೆಲ ದೇಶಗಳಲ್ಲಿ ಉಂಟಾಗಿರುವ ಅಸ್ಥಿರ ಪರಿಸ್ಥಿತಿಯಿಂದಾಗಿ ಅಂತರರಾಷ್ಟ್ರೀಯ ವಿಮಾನಯಾನ ಸೇವೆಗಳಲ್ಲಿ ವ್ಯತ್ಯಯ ಉಂಟಾಗಿದೆ. ಈ ಹಿನ್ನೆಲೆಯಲ್ಲಿ ಜಿಲ್ಲೆಯ ಸಾರ್ವಜನಿಕರ ಹಿತದೃಷ್ಟಿಯಿಂದ ಜಿಲ್ಲಾಡಳಿತವು ಸಹಾಯವಾಣಿಯನ್ನು ಆರಂಭಿಸಿದೆ.
ಇರಾನ್, ಇಸ್ರೇಲ್, ಲೆಬನಾನ್, ಸೌದಿ ಅರೇಬಿಯಾ ಸೇರಿದಂತೆ 11 ದೇಶಗಳ ವೈಮಾನಿಕ ಮಾರ್ಗಗಳನ್ನು ಮಾರ್ಚ್ 2ರ ವರೆಗೆ ಮುಚ್ಚಲಾಗಿದೆ. ಈ ಅನಿರೀಕ್ಷಿತ ಅಡಚಣೆಯಿಂದಾಗಿ ಕರ್ನಾಟಕದ ಅನೇಕ ಪ್ರಯಾಣಿಕರು ದುಬೈ ಸೇರಿದಂತೆ ವಿವಿಧ ಮಧ್ಯಪ್ರಾಚ್ಯ ರಾಷ್ಟ್ರಗಳಲ್ಲಿ ಸಿಲುಕಿಕೊಂಡಿದ್ದಾರೆ.
ಜಿಲ್ಲೆಯ ನಿವಾಸಿಗಳು ಅಥವಾ ಅವರ ಸಂಬಂಧಿಕರು ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ತುರ್ತು ಕಾರ್ಯಾಚರಣೆ ಕೇಂದ್ರ 08192-234034, 1077 ಟೋಲ್ ಫ್ರೀ ಸಂಖ್ಯೆ, ರಾಜ್ಯ ತುರ್ತು ಕಾರ್ಯಾಚರಣೆ ಕೇಂದ್ರ 080-22340676, 080-22253707, ಟೋಲ್ ಫ್ರೀ ಸಂಖ್ಯೆ: 1070 ಗೆ ಕರೆ ಮಾಡಿ ಮಾಹಿತಿ ಹಾಗೂ ಸಹಾಯ ಪಡೆಯಬಹುದು.
ಮಧ್ಯಪ್ರಾಚ್ಯ ದೇಶಗಳಲ್ಲಿರುವ ಕರ್ನಾಟಕದ ನಿವಾಸಿಗಳು ಅಲ್ಲಿನ ಸ್ಥಳೀಯ ಸರ್ಕಾರಗಳು ನೀಡುವ ಸುರಕ್ಷತಾ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸಬೇಕು. ಸಂಕಷ್ಟದಲ್ಲಿರುವವರು ಆಯಾ ದೇಶದ ಭಾರತೀಯ ರಾಯಭಾರಿ ಕಚೇರಿಯ ಸಹಾಯವಾಣಿಗೆ ಕರೆ ಮಾಡಬೇಕು ಅಥವಾ ‘ಸಾರಥಿ ಸಹಾಯತಾ’ ಪೋರ್ಟಲ್‌ನಲ್ಲಿ ನೋಂದಾಯಿಸಿಕೊಳ್ಳಬೇಕು. ವೀಸಾ ಸಂಬಂಧಿತ ಸಮಸ್ಯೆಗಳಿದ್ದಲ್ಲಿ ಹತ್ತಿರದ ಎಫ್‌ಆರ್‌ಆರ್‌ಒ ಕಚೇರಿಯನ್ನು ಸಂಪರ್ಕಿಸಬೇಕು ಎಂದು ಜಿಲ್ಲಾಧಿಕಾರಿ ಜಿ.ಎಂ.ಗಂಗಾಧರಸ್ವಾಮಿ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.