
ದಾವಣಗೆರೆ: ಶರಣರು ಸಮಾಜಕ್ಕೆ ನೀಡಿದ ಮಾನವೀಯ ಮೌಲ್ಯಗಳು ಮತ್ತು ಸಮಾನತೆಯ ಸಂದೇಶಗಳು ಎಲ್ಲ ಕಾಲಕ್ಕೂ ಪ್ರಸ್ತುತ ಎಂದು ದಾವಣಗೆರೆ ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಎಚ್. ವಿಶ್ವನಾಥ್ ಅಭಿಪ್ರಾಯಪಟ್ಟರು.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮಂಗಳವಾರ ನಡೆದ ಕಾಯಕ ಶರಣರ ಜಯಂತಿಯಲ್ಲಿ ಅವರು ಮಾದಾರ ಚನ್ನಯ್ಯ, ಮಾದಾರ ಧೂಳಯ್ಯ, ಡೋಹರ ಕಕ್ಕಯ್ಯ, ಉರಿಲಿಂಗ ಪೆದ್ದಿ ಮತ್ತು ಸಮಗಾರ ಹರಳಯ್ಯ ಅವರ ಕುರಿತು ಉಪನ್ಯಾಸ ನೀಡಿದರು.
‘ಪ್ರತಿಯೊಬ್ಬರೂ ಶ್ರಮಜೀವಿಗಳಾಗಬೇಕು, ಕಾಯಕದಲ್ಲಿಯೇ ದೈವತ್ವವನ್ನು ಕಾಣಬೇಕು ಎಂಬುದು ಶರಣರ ಆಶಯವಾಗಿತ್ತು. 12ನೇ ಶತಮಾನದಲ್ಲಿನ ಅನುಭವ ಮಂಟಪ ಎಲ್ಲರನ್ನೂ ಒಗ್ಗೂಡಿಸಿ ಸಂಸ್ಕಾರ ಮತ್ತು ಸಮಾನತೆಯನ್ನು ನೀಡಿತು’ ಎಂದು ಹೇಳಿದರು.
‘ಭಾರತೀಯ ಸಂವಿಧಾನದಲ್ಲಿರುವ ಸಮಾನತೆ ಮತ್ತು ಭ್ರಾತೃತ್ವದ ಗುಣಗಳು ಬಸವಾದಿ ಶರಣರ ಕೊಡುಗೆ. ಸೋಮಾರಿತನವಿಲ್ಲದ ಬದುಕನ್ನು ಶರಣರು ಕಲಿಸಿಕೊಟ್ಟರು’ ಎಂದರು.
ಜಿಲ್ಲಾಧಿಕಾರಿ ಜಿ.ಎಂ. ಗಂಗಾಧರಸ್ವಾಮಿ, ಹೆಚ್ಚುವರಿ ಜಿಲ್ಲಾಧಿಕಾರಿ ಶೀಲವಂತ ಶಿವಕುಮಾರ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ರವಿಚಂದ್ರ, ಯೋಜನಾ ನಿರ್ದೇಶಕ ಮಹತೇಂಶ್, ‘ಧೂಡಾ’ ಆಯುಕ್ತ ಹುಲಿಮನೆ ತಿಮ್ಮಣ್ಣ ಹಾಜರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.