ADVERTISEMENT

ದಾವಣಗೆರೆ: ಟ್ರ್ಯಾಕ್ಟರ್ ನಿಂದ ಬಿದ್ದು ವ್ಯಕ್ತಿ ಸಾವು

​ಪ್ರಜಾವಾಣಿ ವಾರ್ತೆ
Published 6 ಜೂನ್ 2020, 5:45 IST
Last Updated 6 ಜೂನ್ 2020, 5:45 IST
ಟ್ರಾಕ್ಟರ್‌‌ನಿಂದ ಬಿದ್ದು ವ್ಯಕ್ತಿ ಸಾವು
ಟ್ರಾಕ್ಟರ್‌‌ನಿಂದ ಬಿದ್ದು ವ್ಯಕ್ತಿ ಸಾವು   

ನ್ಯಾಮತಿ: ಸಮೀಪದ ಕುಂಕುವ ಗ್ರಾಮದಲ್ಲಿ ಟ್ರ್ಯಾಕ್ಟರ್ ಪಲ್ಟಿಯಾಗಿ ವ್ಯಕ್ತಿಯೊಬ್ಬರು ಶನಿವಾರ ಬೆಳಿಗ್ಗೆ ಮೃತಪಟ್ಟಿದ್ದಾರೆ.

ಗ್ರಾಮದ ಟ್ರಾಕ್ಟರ್ ಮಾಲೀಕ ಲೋಕೇಶಯ್ಯ (55) ಮೃತಪಟ್ಟವರು. ವಾಹನವೊಂದನ್ನು ಹಿಂದಿಕ್ಕುವ ಭರದಲ್ಲಿ ವೇಗವಾಗಿ ಹೋಗುತ್ತಿದ್ದಾಗ ರಸ್ತೆ ಬದಿಯಲ್ಲಿ ಕಾಮಗಾರಿಗೆಂದು ರಾಶಿ ಹಾಕಿದ್ದ ಜಲ್ಲಿಕಲ್ಲುಗಳ ಮೇಲೆ ಟ್ರೈಲರ್ ಹತ್ತಿದೆ. ಲೋಕೇಶಯ್ಯ ಅವರು ಭಯದಿಂದ ಸೀಟಿನಿಂದ ಕೆಳಗೆ ಜಿಗಿದು ತೀವ್ರವಾಗಿ ಗಾಯಗೊಂಡು ಮೃತಪಟ್ಟಿದ್ದಾರೆ.

ನ್ಯಾಮತಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.