
ಪ್ರಜಾವಾಣಿ ವಾರ್ತೆ
ಜೈಲು (ಪ್ರಾತಿನಿಧಿಕ ಚಿತ್ರ)
ದಾವಣಗೆರೆ: ಬಾಲಕಿಯನ್ನು ಅಪಹರಿಸಿ ವಿವಾಹವಾಗಿ ಅತ್ಯಾಚಾರ ಎಸಗಿದ ಅಪರಾಧಿಗೆ 1ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ 20 ವರ್ಷ ಜೈಲು ಶಿಕ್ಷೆ ಹಾಗೂ ₹ 40 ಸಾವಿರ ದಂಡ ವಿಧಿಸಿ ಆದೇಶಿಸಿದೆ.
ಎಂ. ಅರುಣ (22) ಶಿಕ್ಷೆಗೆ ಗುರಿಯಾದ ಅಪರಾಧಿ. ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಧೀಶ ಶ್ರೀರಾಮ ನಾರಾಯಣ ಹೆಗಡೆ ಸಂತ್ರಸ್ತ ಬಾಲಕಿಗೆ ₹ 5 ಲಕ್ಷ ಪರಿಹಾರಕ್ಕೆ ಶಿಫಾರಸು ಮಾಡಿದ್ದಾರೆ.
16 ವರ್ಷದ ಬಾಲಕಿ 2022ರ ಡಿ.18ರಂದು ನಾಪತ್ತೆಯಾಗಿದ್ದರು. ಬಾಲಕಿಗೆ ಹುಡುಕಾಟ ನಡೆಸಿದ ಕುಟುಂಬದ ಸದಸ್ಯರು ಮಹಿಳಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಬಾಲಕಿಯನ್ನು ಅಪಹರಣ ಮಾಡಿದ್ದು ಪೊಲೀಸರ ತನಿಖೆಯಿಂದ ಗೊತ್ತಾಗಿತ್ತು. ಅರುಣನನ್ನು ಬಂಧಿಸಿದ ಪೊಲೀಸ್ ಇನ್‌ಸ್ಟೆಕ್ಟರ್ ಎಂ.ಆರ್. ಚೌಬೆ ಅವರು ನ್ಯಾಯಾಲಯಕ್ಕೆ ದೋಷಾರೋಪಪಟ್ಟಿ ಸಲ್ಲಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.