ಬಂಧನ
(ಪ್ರಾತಿನಿಧಿಕ ಚಿತ್ರ)
ನ್ಯಾಮತಿ: ತಾಲ್ಲೂಕಿನ ಹೊನ್ನಾಳಿ ಶಿವಮೊಗ್ಗ ರಸ್ತೆಯ ಸಾಲಬಾಳು ಕ್ರಾಸ್ ಸಮೀಪ ಕಲ್ಬಿಗಿರಿ ರಂಗನಾಥಸ್ವಾಮಿ ದೇವಸ್ಥಾನಕ್ಕೆ ಹೋಗುವ ಕಚ್ಚಾ ರಸ್ತೆಯ ಪಕ್ಕದ ಅರಣ್ಯ ಇಲಾಖೆಗೆ ಸೇರಿದ ಅರಣ್ಯ ಪ್ರದೇಶದಲ್ಲಿ ನಾಲ್ವರನ್ನು ಬಂಧಿಸಿ ಅವರ ಬಳಿ ಇದ್ದ ಗಾಂಜಾವನ್ನು ವಶಪಡಿಸಿಕೊಂಡಿರುವ ಘಟನೆ ಶನಿವಾರ ನಡೆದಿದೆ.
ಅರ್ಬಾಜ್ ಖಾನ್ ಶಿವಮೊಗ್ಗ, ಶಂಕರನಾಯ್ಕ ಹೊಸಜೋಗ, ಮಹಮ್ಮದ್ ಹುಸೈನ್ ರಝ ಶಿವಮೊಗ್ಗ, ಜಾಫರ್ ಸಾದೀಖ್ ಶಿವಮೊಗ್ಗ, ಮಹಮ್ಮದ್ ರೂಹಿತ್ ರಾಮನಗರ ಬಂಧಿತ ಆರೋಪಿಗಳು.
ನ್ಯಾಮತಿ ಪೊಲೀಸ್ ಇನ್‌ಸ್ಪೆಕ್ಟರ್ ಎನ್.ಎಸ್.ರವಿ ಅವರು ಆರೋಪಿಗಳನ್ನು ಬಂಧಿಸಿ, ಅವರ ಬಳಿ ಇದ್ದ 3 ಕೆ.ಜಿ.154 ಗ್ರಾಂ ತೂಕದ ಗಾಂಜಾ, ಮೂರು ಮೊಬೈಲ್, ಎರಡು ಬೈಕ್, ಒಂದು ಬಿಳಿ ಬಣ್ಣದ ಪ್ಲಾಸ್ಟಿಕ್ ಚೀಲ ಮತ್ತು ಖಾಲಿ ಸಣ್ಣ ಪಾರದರ್ಶಕ ಪ್ಲಾಸ್ಟಿಕ್ ಜಿಪ್ ಕವರ್‌ನ ಬಂಡಲ್‌ನ್ನು ವಶಡಿಸಿಕೊಂಡಿದ್ದು ಒಟ್ಟು ಅದರ ಮೌಲ್ಯ 3,,20,೦೦೦ ಅಂದಾಜಿಸಲಾಗಿದೆ.
ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ ಎಂದು ಪೊಲೀಸ್ ಇನ್‌ಸ್ಪೆಕ್ಟರ್ ಎನ್.ಎಸ್. ರವಿ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.