ತ್ಯಾವಣಿಗೆ: ಸಮೀಪದ ದೊಡ್ಡಘಟ್ಟ ಗ್ರಾಮದ ಕರಿಯಾಂಬಿಕಾ ದೇವಿ ಜಾತ್ರಾ ಮಹೋತ್ಸವ ಹಾಗೂ ಸಿಡಿ ಉತ್ಸವ ಸಾವಿರಾರು ಭಕ್ತರ ಸಮ್ಮುಖದಲ್ಲಿ ಶುಕ್ರವಾರ ವಿಜೃಂಭಣೆಯಿಂದ ನಡೆಯಿತು.
ಕರಿಯಾಂಬಿಕಾ ದೇವಿ ಉತ್ಸವಕ್ಕೆ ರಾಜ್ಯದ ವಿವಿಧ ಮೂಲೆಗಳಿಂದ ಭಕ್ತರ ದಂಡು ಹರಿದು ಬಂದಿತ್ತು. ಬಿಸಿಲ ಜಳದ ನಡುವೆಯೂ ಸಿಡಿ ಉತ್ಸವ ಕಣ್ತುಂಬಿಕೊಳ್ಳಲು ದೇವಾಲಯ ಆವರಣದಲ್ಲಿ ಭಕ್ತರು ಅಪಾರ ಸಂಖ್ಯೆಯಲ್ಲಿ ನೆರೆದಿದ್ದರು.
ಮಹಿಳೆಯರು ದೇವಿಗೆ ಉಡಿ ತುಂಬಿದರು. ಮಕ್ಕಳು ಆಟದ ಸಾಮಗ್ರಿಗಳನ್ನು ಉತ್ಸಾಹದಿಂದ ಖರಿದಿಸುತ್ತಿದ್ದುದು ಕಂಡುಬಂದಿತು. ಜಾತ್ರೋತ್ಸವದ ಅಂಗವಾಗಿ ಗ್ರಾಮದ ಪ್ರಮುಖ ಬೀದಿಗಳನ್ನು ವಿದ್ಯುತ್ ದೀಪಗಳಿಂದ ಅಲಂಕರಿಸಲಾಗಿತ್ತು.
ಗ್ರಾಮದ ಪ್ರಮುಖ ಬೀದಿಗಳಲ್ಲಿ ಕರಿಯಾಂಬಿಕಾ ದೇವಿ ಉತ್ಸವಮೂರ್ತಿಯ ಮೆರವಣಿಗೆ ನಡೆಸಲಾಯಿತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.