ಜಗಳೂರು: ‘ಗೃಹಲಕ್ಷ್ಮೀ’ ಯೋಜನೆಯನ್ನು ಯಶಸ್ವಿಯಾಗಿ ಜಾರಿಗೊಳಿಸುವ ದಿಸೆಯಲ್ಲಿ ಅಧಿಕಾರಿಗಳು ಸಮರ್ಪಣಾ ಮನೋಭಾವದಿಂದ ಕೆಲಸ ಮಾಡಬೇಕು ಎಂದು ಶಾಸಕ ಬಿ.ದೇವೇಂದ್ರಪ್ಪ ಹೇಳಿದರು. ಪಟ್ಟಣದ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ಯೋಜನೆ ಕುರಿತು ಗ್ರಾಮ ಪಂಚಾಯಿತಿ ನೋಡಲ್ ಅಧಿಕಾರಿಗಳ ಸಭೆಯಲ್ಲಿ ಅವರು ಈ ಸೂಚನೆ ನೀಡಿದರು.
ಆಗಸ್ಟ್ 30ರಂದು ಮೈಸೂರಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗೃಹಲಕ್ಷ್ಮಿ ಯೋಜನೆ ಚಾಲನೆ ನೀಡಲಿದ್ದಾರೆ. ಅಂದು ಜಗಳೂರಿನಲ್ಲಿ ಚಾಲನಾ ಕಾರ್ಯಕ್ರಮ ಆಯೋಜಿಸಲಾಗಿದೆ. ಅರ್ಹ ಫಲಾನುಭವಿಗಳಿಗೆ ಜಾಗೃತಿ ಮೂಡಿಸಿ ಕಡ್ಡಾಯವಾಗಿ ಅರ್ಜಿ ಸಲ್ಲಿಸಲು ಕ್ರಮಕೈಗೊಳ್ಳಬೇಕು. ತಾಂತ್ರಿಕ ದೋಷಗಳನ್ನು ಸರಿಪಡಿಸಿಕೊಂಡು ಸಂಪನ್ಮೂಲ ವ್ಯಕ್ತಿಗಳಿಂದ ಮಾಹಿತಿ ಪಡೆಯಬೇಕು ಎಂದು ಸಲಹೆ ನೀಡಿದರು.
ತಾಲ್ಲೂಕಿನಲ್ಲಿ ಶೇ 86ರಷ್ಟು ಅರ್ಜಿ ಸಲ್ಲಿಕೆಯಾಗಿದೆ. ಎಪಿಎಲ್ ಫಲಾನುಭವಿಯೂ ಅರ್ಜಿಸಲ್ಲಿಸಬಹುದು ಆದರೆ ಆದಾಯ ತೆರಿಗೆ ಪಾವತಿದಾರರಾಗಿರಬಾರದು. ಹೆಚ್ಚಿನ ಮಾಹಿತಿಗಾಗಿ 8147500500 ಸಂಖ್ಯೆಗೆ ಎಸ್‌ಎಂಎಸ್ ಮಾಡಬಹುದು ಅಥವಾ 1902 ಸಂಖ್ಯೆಗೆ ಉಚಿತವಾಗಿ ಕರೆ ಮಾಡಬಹುದು ಎಂದುಆಹಾರ ಮತ್ತು ನಾಗರಿಕ ಇಲಾಖೆ ಉಪನಿರ್ದೇಶಕ ಸಿದ್ದರಾಮ್ ಮರಿಹಾಳ್ ಮಾಹಿತಿ ನೀಡಿದರು.
ತಹಶೀಲ್ದಾರ್ ಮಂಜಾನಂದ, ತಾ.ಪಂ ಇಓ ಚಂದ್ರಶೇಖರ್, ಪ.ಪಂ.ಮುಖ್ಯಾಧಿಕಾರಿ ಲೋಕ್ಯಾನಾಯ್ಕ, ಸಿಡಿಪಿಓ ಬಿರೇಂದ್ರ ಕುಮಾರ್ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.