ADVERTISEMENT

ದಾವಣಗೆರೆ: ಪೊಲೀಸ್ ಕಾನ್‌ಸ್ಟೇಬಲ್‌ಗೆ ಕೊರೊನಾ ಸೋಂಕು

​ಪ್ರಜಾವಾಣಿ ವಾರ್ತೆ
Published 2 ಜೂನ್ 2020, 9:23 IST
Last Updated 2 ಜೂನ್ 2020, 9:23 IST
   

ದಾವಣಗೆರೆ: ಕೋವಿಡ್ ಆಸ್ಪತ್ರೆಯಲ್ಲಿ ಸೇವೆ ಸಲ್ಲಿಸಿದ ಬಡಾವಣೆ ಪೊಲೀಸ್ ಠಾಣೆಯ ಹೆಡ್ ಕಾನ್‌ಸ್ಟೇಬಲ್‌ಗೆ ಕೊರೊನಾ ಸೋಂಕು ಇರುವುದು ದೃಢಪಟ್ಟಿದೆ‌.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹನುಮಂತರಾಯ ಈ ಬಗ್ಗೆ ಮಾಹಿತಿ ನೀಡಿದರು.

ಎರಡು ದಿನಗಳ ಹಿಂದೆ ಗಂಟಲು ದ್ರವ ಸಂಗ್ರಹ ಮಾಡಿ ಕಳುಹಿಸಲಾಗಿತ್ತು. ಕೆಲ ದಿನ ದಾವಣಗೆರೆ ಜಿಲ್ಲಾ ಕೋವಿಡ್ ಆಸ್ಪತ್ರೆಯಲ್ಲಿ ಕೆಲಸ ಮಾಡಿದ್ದರು. ಜೊತೆಗಿದ್ದ ಸಿಬ್ಬಂದಿಯ ವರದಿ ನೆಗೆಟಿವ್ ಬಂದಿದೆ.

ADVERTISEMENT

ಸೋಂಕಿತ ಫೊಲೀಸ್ ಸಿಬ್ಬಂದಿಯ ಕುಟುಂಬ ಸದಸ್ಯರ ಮಾದರಿ ಸಂಗ್ರಹ ಮಾಡಲಾಗಿದೆ.

ಸೋಂಕಿತರಿಗೆ ಜಿಲ್ಲಾ ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಈ ಹಿಂದೆ ಕಂಟೈಮೆಂಟ್ ಜೋನ್‌ನಲ್ಲಿ ಸೇವೆ ಮಾಡಿದ ಪೊಲೀಸ್ ಕಾನ್‌ಸ್ಟೇಬಲ್‌ಗೆ ಸೋಂಕು ಪತ್ತೆ ಆಗಿತ್ತು. ಅವರು ಗುಣಮುಖರಾಗಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.