ADVERTISEMENT

ದ್ವಿತೀಯ ಪಿಯು: ದಾವಣಗೆರೆಗೆ ಶೇ 62.53 ಫಲಿತಾಂಶ

​ಪ್ರಜಾವಾಣಿ ವಾರ್ತೆ
Published 15 ಏಪ್ರಿಲ್ 2019, 6:24 IST
Last Updated 15 ಏಪ್ರಿಲ್ 2019, 6:24 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ದಾವಣಗೆರೆ:ದಾವಣಗೆರೆ ಜಿಲ್ಲೆಯು ಶೇ 62.53 ಫಲಿತಾಂಶದೊಂದಿಗೆ ರಾಜ್ಯಕ್ಕೆ 22ನೇ ಸ್ಥಾನ ಪಡೆದಿದೆ. ಕಳೆದ ವರ್ಷ ಶೇ 63.29 ಫಲಿತಾಂಶದೊಂದಿಗೆ ರಾಜ್ಯಕ್ಕೆ 23ನೇ ಸ್ಥಾನ ಪಡೆದಿತ್ತು. ಈ ಬಾರಿ ಒಂದು ಸ್ಥಾನ ಏರಿಕೆಯಾಗಿದ್ದರೂ ಒಟ್ಟಾರೆ ಫಲಿತಾಂಶದಲ್ಲಿ ಶೇ 0.76 ಕಡಿಮೆಯಾಗಿದೆ. 2017ನೇ ಸಾಲಿಗಿಂತಲೂ 2018ನೇ ಸಾಲಿನಲ್ಲಿ ಫಲಿತಾಂಶವು ಶೇ 10.91ರಷ್ಟು ಹೆಚ್ಚಾಗಿತ್ತು. ಆದರೆ, ಈ ಬಾರಿ ಅಲ್ಪ ಪ್ರಮಾಣದಲ್ಲಿ ಕುಸಿದಿದೆ.

ರಾಜ್ಯದ ಸರಾಸರಿ ಫಲಿತಾಂಶ ಶೇ 61.73 ಆಗಿದ್ದು, ದಾವಣಗೆರೆ ಜಿಲ್ಲೆಯು ರಾಜ್ಯದ ಸರಾಸರಿಗಿಂತಲೂ ಶೇ 0.8 ಹೆಚ್ಚು ಫಲಿತಾಂಶ ಪಡೆದಿದೆ. ಪ್ರಸಕ್ತ ಸಾಲಿನಲ್ಲಿ ಜಿಲ್ಲೆಯಲ್ಲಿ ಒಟ್ಟು 22,362 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದಾರೆ. ಇದರಲ್ಲಿ 18,862 ಹೊಸ ವಿದ್ಯಾರ್ಥಿಗಳು, 2,990 ಪುನರಾವರ್ತಿತ ವಿದ್ಯಾರ್ಥಿಗಳು ಹಾಗೂ 510 ಬಾಹ್ಯ ವಿದ್ಯಾರ್ಥಿಗಳು ಇದ್ದಾರೆ.

ಕನ್ನಡ ಮಾಧ್ಯಮದಲ್ಲಿ 11,116 ವಿದ್ಯಾರ್ಥಿಗಳು ಹಾಗೂ ಇಂಗ್ಲಿಷ್‌ ಮಾಧ್ಯಮದಲ್ಲಿ 11,246 ವಿದ್ಯಾರ್ಥಿಗಳು ಪರೀಕ್ಷೆ ತೆಗೆದುಕೊಂಡಿದ್ದರು. 10,953 ಗಂಡುಮಕ್ಕಳು ಹಾಗೂ 11,409 ಹೆಣ್ಣುಮಕ್ಕಳು ಪರೀಕ್ಷೆ ಬರೆದಿದ್ದರು. ಕಲಾ ವಿಭಾಗದಲ್ಲಿ 7,733 ವಿದ್ಯಾರ್ಥಿಗಳು, ವಿಜ್ಞಾನ ವಿಭಾಗದಲ್ಲಿ 8,786 ವಿದ್ಯಾರ್ಥಿಗಳು ಹಾಗೂ ವಾಣಿಜ್ಯ ವಿಭಾಗದಲ್ಲಿ 5,843 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದರು.

ADVERTISEMENT

ಇನ್ನಷ್ಟು...

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.