ADVERTISEMENT

ದಾವಣಗೆರೆಯಲ್ಲಿ ಜೋರು ಮಳೆ

​ಪ್ರಜಾವಾಣಿ ವಾರ್ತೆ
Published 20 ಮೇ 2025, 11:14 IST
Last Updated 20 ಮೇ 2025, 11:14 IST
   

ದಾವಣಗೆರೆ: ನಗರವೂ ಸೇರಿದಂತೆ ಜಿಲ್ಲೆಯ ವಿವಿಧೆಡೆ ಮಂಗಳವಾರ ಭಾರಿ ಮಳೆ ಸುರಿಯಿತು. ನಗರದಲ್ಲಿ ಬೆಳಿಗ್ಗೆ 11 ಗಂಟೆ ಸುಮಾರಿಗೆ ಆರಂಭವಾದ ಮಳೆ ಮಧ್ಯಾಹ್ನ 1 ಗಂಟೆವರೆಗೂ ರಭಸವಾಗಿ ಸುರಿಯಿತು.

ಮಳೆಯಿಂದಾಗಿ ತಗ್ಗು ಪ್ರದೇಶಗಳಲ್ಲಿ ನೀರು ಸಂಗ್ರಹಗೊಂಡು ಸ್ಥಳೀಯ ನಿವಾಸಿಗಳು ಸಂಕಷ್ಟ ಅನುಭವಿಸಿದರು. ರಸ್ತೆಗಳಲ್ಲಿ ಹಳ್ಳದಂತೆ ನೀರು ಹರಿದ ಪರಿಣಾಮ ವಾಹನ ಸವಾರರು ಮುಂದೆ ಸಾಗಲು ಕೆಲ ಕಾಲ ಪರದಾಡಿದರು.

ಜಿಲ್ಲೆಯ ನ್ಯಾಮತಿ, ಸಂತೇಬೆನ್ನೂರು, ಮಲೇಬೆನ್ನೂರು, ಕಡರನಾಯ್ಕನಹಳ್ಳಿ ಭಾಗದಲ್ಲೂ ಜೋರು ಮಳೆ ಸುರಿಯಿತು. ಗಾಳಿ, ಮಳೆಯಿಂದಾಗಿ ಭತ್ತದ ಬೆಳೆ ಚಾಪೆ ಹಾಸಿದ್ದು, ರೈತರು ಆತಂಕದಲ್ಲಿದ್ದಾರೆ. ಈಗಾಗಲೇ ಬೆಳೆಯ ಕಟಾವು ನಡೆಸಿರುವ ರೈತರು, ಭತ್ತವನ್ನು ಒಣಗಿಸಲಾಗದೇ ತೇವಾಂಶದ ಸಮಸ್ಯೆ ಎದುರಿಸುತ್ತಿದ್ದಾರೆ. ಬಸವಾಪಟ್ಟಣದಲ್ಲಿ ಧಾರಾಕಾರ ಮಳೆಯಾಗಿದ್ದರಿಂದ ಬಸ್ ನಿಲ್ದಾಣ ಜಲಾವೃತವಾಗಿತ್ತು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.