ದಾವಣಗೆರೆ: ಜಿಲ್ಲಾ ಸಮಾಜ ಕಲ್ಯಾಣ ಇಲಾಖೆಯ ಕಚೇರಿ ವ್ಯವಸ್ಥಾಪಕ ಶಿವಕುಮಾರ್ (49) ಅವರು ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಆಂಜನೇಯ ಬಡಾವಣೆಯ ನಿವಾಸಿಯಾಗಿರುವ ಶಿವಕುಮಾರ್ ಭಾನುವಾರ ಮಧ್ಯಾಹ್ನ ಮನೆಯಿಂದ ಹೊರಟಿದ್ದು, ಇಲ್ಲಿನ ಜಿಲ್ಲಾಡಳಿತ ಭವನದಲ್ಲಿರುವ ಕಚೇರಿಯಲ್ಲಿ ಯಾರು ಇಲ್ಲದಿರುವ ವೇಳೆ ನೇಣು ಹಾಕಿಕೊಂಡಿದ್ದಾರೆ.
ಸೋಮವಾರ ಬೆಳಿಗ್ಗೆ ಸಿಬ್ಬಂದಿ ಕಚೇರಿ ಬಾಗಿಲು ತೆರೆದಾಗ ವಿಷಯ ಗೊತ್ತಾಗಿದೆ. ಆತ್ಮಹತ್ಯೆಗೆ ಕಾರಣ ತಿಳಿದುಬಂದಿಲ್ಲ. ಗಾಂಧೀನಗರ ಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿ ಪರಿಶೀಲನೆ ನಡೆಸುತ್ತಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.