
ಕಾಂಗ್ರೆಸ್ ಹಾಗೂ ಬಿಜೆಪಿ ಭಾವುಟ
ದಾವಣಗೆರೆ: ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಪುತ್ರ ಸಮರ್ಥ ಶಾಮನೂರು ಕಣಕ್ಕೆ ಇಳಿಸಲು ಆಸಕ್ತಿ ತೋರಿರುವ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ಅವರು ಕಾಂಗ್ರೆಸ್ ಟಿಕೆಟ್‌ಗಾಗಿ ‘ಬ್ಲ್ಯಾಕ್‌ಮೇಲ್’ ತಂತ್ರ ಅನುಸರಿಸುತ್ತಿದ್ದಾರೆ ಎಂದು ಬಿಜೆಪಿ ಮುಖಂಡ ಯಶವಂತರಾವ್ ಜಾಧವ್ ಆರೋಪಿಸಿದರು.
‘ಶಾಮನೂರು ಶಿವಶಂಕರಪ್ಪ ಅಗಲಿಕೆಯ ಬಳಿಕ ಕುಟುಂಬದ ಸದಸ್ಯರನ್ನೇ ಚುನಾವಣಾ ಕಣಕ್ಕೆ ಇಳಿಸಲು ಎಸ್.ಎಸ್.ಮಲ್ಲಿಕಾರ್ಜುನ್ ಪಟ್ಟುಹಿಡಿದಿದ್ದಾರೆ. ಟಿಕೆಟ್ ನೀಡದಿದ್ದರೆ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಹೈಕಮಾಂಡ್‌ಗೆ ಬೆದರಿಕೆ ಹಾಕುತ್ತಿದ್ದಾರೆ’ ಎಂದು ಮಂಗಳವಾರ ಸುದ್ದಿಗೋಷ್ಠಿಯಲ್ಲಿ ದೂರಿದರು.
‘ಶಾಮನೂರು ಶಿವಶಂಕರಪ್ಪ ಹಾಗೂ ಎಸ್.ಎಸ್. ಮಲ್ಲಿಕಾರ್ಜುನ್ ಅವರ ರಾಜಕೀಯ ಯಶಸ್ಸಿನ ಹಿಂದೆ ಮುಸ್ಲಿಂ ಸಮುದಾಯವಿದೆ. 1994ರಿಂದ ಈವರೆಗೆ ಬೆನ್ನಿಗೆ ನಿಂತಿರುವ ಅಲ್ಪಸಂಖ್ಯಾತರು ಉಪಚುನಾವಣೆಯಲ್ಲಿ ಕಾಂಗ್ರೆಸ್ ಟಿಕೆಟ್‌ಗೆ ಬೇಡಿಕೆ ಇಟ್ಟಿದ್ದಾರೆ. ಅಲ್ಪಸಂಖ್ಯಾತರಿಗೆ ಅವಕಾಶ ನೀಡಲು ಸಚಿವರು ಸಿದ್ಧರಿಲ್ಲ’ ಎಂದರು.
ಬಿಜೆಪಿ ಮುಖಂಡರಾದ ಅಣಬೇರು ಜೀವನಮೂರ್ತಿ, ಟಿಂಕರ್ ಮಂಜಣ್ಣ, ಎಂ. ಹಾಲೇಶ್, ಕಿಶೋರಕುಮಾರ್, ಶಿವನಗೌಡ ಪಾಟೀಲ ಹಾಜರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.