
ದಾವಣಗೆರೆ: ಪೊಲೀಸ್ ವರಿಷ್ಠಾಧಿಕಾರಿಯಾಗಿದ್ದ ಉಮಾ ಪ್ರಶಾಂತ್ ಅವರನ್ನು ವರ್ಗಾವಣೆ ಮಾಡಿರುವ ರಾಜ್ಯ ಸರ್ಕಾರ, ಐಪಿಎಸ್ ಅಧಿಕಾರಿ ಎಚ್.ಟಿ. ಶೇಖರ್ ಅವರನ್ನು ಜಿಲ್ಲೆಯ ನೂತನ ಪೊಲೀಸ್ ವರಿಷ್ಠಾಧಿಕಾರಿಯಾಗಿ ನಿಯೋಜಿಸಿದೆ.
ಬೆಂಗಳೂರಿನ ಗುಪ್ತಚರ ವಿಭಾಗದ ಪೊಲೀಸ್ ವರಿಷ್ಠಾಧಿಕಾರಿಯಾಗಿದ್ದ ಶೇಖರ್ ಅವರನ್ನು ದಾವಣಗೆರೆಗೆ ವರ್ಗಾವಣೆ ಮಾಡಿ ಆದೇಶಿಸಿದೆ. ಉಮಾ ಪ್ರಶಾಂತ್ ಅವರಿಗೆ ಸ್ಥಳ ನಿಯುಕ್ತಿಗೊಳಿಸಿಲ್ಲ.
ಮೂಲತಃ ಬಾಗಲಕೋಟೆ ಜಿಲ್ಲೆಯ ಶೇಖರ್ ಎಚ್.ತೆಕ್ಕಣ್ಣನವರ್ ಪಶು ವೈದ್ಯಕೀಯ ವಿಷಯದಲ್ಲಿ ಸ್ನಾತಕೋತ್ತರ ಪದವೀಧರರು. ತೀರ್ಥಹಳ್ಳಿ, ಹಿರಿಯೂರು ಉಪ ವಿಭಾಗದಲ್ಲಿ ಡಿವೈಎಸ್ಪಿ, ಶಿವಮೊಗ್ಗ ಜಿಲ್ಲೆಯ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ, ಮೈಸೂರು ಪೊಲೀಸ್ ಕಮಿಷನರೇಟ್ ವ್ಯಾಪ್ತಿಯ ಡಿಸಿಪಿ, ಬೆಂಗಳೂರು ಕೇಂದ್ರ ವಿಭಾಗದ ಡಿಸಿಪಿಯಾಗಿ ಕಾರ್ಯನಿರ್ವಹಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.