ಚನ್ನಗಿರಿ: ತಾಲ್ಲೂಕಿನ ದೇವರಹಳ್ಳಿ ಗ್ರಾಮದಲ್ಲಿರುವ ಜವಾಹರ್ ನವೋದಯ ವಿದ್ಯಾಲಯದ ವಿದ್ಯಾರ್ಥಿನಿ ಹರಿಯಾಣದಲ್ಲಿ ನಡೆಯಲಿರುವ ರಾಷ್ಟ್ರಮಟ್ಟದ ಷಟಲ್ ಬ್ಯಾಡ್ಮಿಂಟನ್ ಕ್ರೀಡಾಕೂಟಕ್ಕೆ ಆಯ್ಕೆಯಾಗಿದ್ದಾಳೆ.
9ನೇ ತರಗತಿ ವಿದ್ಯಾರ್ಥಿನಿ ಎಚ್.ಡಿ.ಚಿನ್ಮಯಿ ಆಗಸ್ಟ್ 13, 14 ಮತ್ತು 15ರಂದು ಪಾಂಡಿಚೇರಿಯಲ್ಲಿ ನಡೆದ ಷಟಲ್ ಬ್ಯಾಡ್ಮಿಂಟನ್ ಪ್ರಾದೇಶಿಕ ಮಟ್ಟದ ಕ್ರೀಡಾಕೂಟದಲ್ಲಿ ಭಾಗವಹಿಸಿ, ರಾಷ್ಟ್ರಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾಗಿದ್ದಾಳೆ ಎಂದು ಪ್ರಾಂಶುಪಾಲರಾದ ಎ. ವಿಜಯ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.