ಚನ್ನಗಿರಿ: ಒಂದು ವಾರದಿಂದ ಬಿಸಿಲಿನ ತಾಪ ಹೆಚ್ಚಾಗುತ್ತಿದ್ದು, ಜನರು ದಾಹವನ್ನು ತಣಿಸಿಕೊಳ್ಳಲು ಕಲ್ಲಂಗಡಿ ಹಣ್ಣಿನ ಮೊರೆ ಹೋಗಿದ್ದಾರೆ.
ಜನವರಿಯಿಂದಲೂ ಬಿಸಿಲಿನ ತಾಪ ದಿನೇ ದಿನೇ ಹೆಚ್ಚಳವಾಗುತ್ತಿದೆ. ಜನರು ತಂಪು ಪಾನೀಯ ಹಾಗೂ ಹೆಚ್ಚು ನೀರಿನ ಅಂಶ ಹೊಂದಿರುವ ಕಲ್ಲಂಗಡಿ ಹಣ್ಣುಗಳ ಮೊರೆ ಹೋಗಿದ್ದಾರೆ.
ಪಟ್ಟಣದಲ್ಲಿ ಜನನಿಬಿಡ ಸ್ಥಳಗಳಲ್ಲಿ ಕಲ್ಲಂಗಡಿ ರಾಶಿ ಹಾಕಿಕೊಂಡು ಹಣ್ಣನ್ನು ಮಾರಾಟ ಮಾಡುವ ದೃಶ್ಯ ಸಾಮಾನ್ಯವಾಗಿದೆ. ಬಿಸಿಲು ಇನ್ನಷ್ಟು ಹೆಚ್ಚಾಗುವ ಸಾಧ್ಯತೆಯಿದ್ದು, ಮುಂದಿನ ಮೂರು ತಿಂಗಳು ಕಲ್ಲಂಗಡಿ ಹಣ್ಣುಗಳಿಗೆ ವಿಪರೀತ ಬೇಡಿಕೆ ಇರುತ್ತದೆ.
ಬೆಳಿಗ್ಗೆ 9ರಿಂದ ಸಂಜೆ 6 ಗಂಟೆವರೆಗೂ ಸೂರ್ಯನ ತಾಪ ಜನರನ್ನು ಬಾಧಿಸುತ್ತಿದೆ. ಎಳನೀರು ಒಂದಕ್ಕೆ ₹50 ದರ ಇದೆ. ಹೀಗಾಗಿ ಕಲ್ಲಂಗಡಿ ಹಣ್ಣಿಗೆ ಬೇಡಿಕೆ ಹೆಚ್ಚಾಗಿದೆ. ಹೀಗಾಗಿ ₹20 ಕೊಟ್ಟು ಒಂದು ಪೀಸ್ ಕಲ್ಲಂಗಡಿ ಹಣ್ಣನ್ನು ತಿಂದು ಸಮಾಧಾನ ಪಟ್ಟುಕೊಳ್ಳುತ್ತಿದ್ದೇವೆ ಎನ್ನುತ್ತಾರೆ ಪಟ್ಟಣದ ವಾಸಿ ಮಂಜುನಾಥ್.
‘ನಮ್ಮ ತಾಲ್ಲೂಕಿನಲ್ಲಿ ಅಡಿಕೆ ಹಾಗೂ ಮೆಕ್ಕೆಜೋಳ ಬಿಟ್ಟರೆ ಕಲ್ಲಂಗಡಿ ಹಣ್ಣನ್ನು ಯಾವ ರೈತರೂ ಬೆಳೆಯುವುದಿಲ್ಲ. ಹೊರ ಜಿಲ್ಲೆಗಳಿಂದ ಕಲ್ಲಂಗಡಿ ಹಣ್ಣನ್ನು ಖರೀದಿಸಿ ತಂದು ಮಾರಾಟ ಮಾಡುತ್ತಿದ್ದೇವೆ. 1 ಕೆ.ಜಿ ಕಲ್ಲಂಗಡಿಯನ್ನು ₹30ರಂತೆ ಮಾರಾಟ ಮಾಡುತ್ತಿದ್ದೇವೆ’ ಎಂದು ಕಲ್ಲಂಗಡಿ ಹಣ್ಣಿನ ವ್ಯಾಪಾರಿ ಬಷೀರ್ ಸಾಬ್ ತಿಳಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.