ದಾವಣಗೆರೆ: ಜಿಲ್ಲೆಯಲ್ಲಿ ಇಬ್ಬರಿಗೆ ಕೊರೊನಾ ಇರುವುದು ಸೋಮವಾರ ದೃಢಪಟ್ಟಿದೆ. ಇಬ್ಬರೂ ನ್ಯಾಮತಿ ತಾಲ್ಲೂಕಿನವರಾಗಿದ್ದಾರೆ.
ನ್ಯಾಮತಿ ತಾಲ್ಲೂಕಿನ ದೊಡ್ಡೇರಿ ಗ್ರಾಮದ 38 ವರ್ಷದ ವ್ಯಕ್ತಿಗೆ ಶೀತಜ್ವರ ಎಂದು ಗುರುತಿಸಲಾಗಿದೆ. ಅವರಿಗೆ ಯಾರ ಸಂಪರ್ಕದಿಂದ ಎಂಬುದನ್ನು ಪತ್ತೆ ಹಚ್ಚಲಾಗುತ್ತಿದೆ. ಚಿನ್ನಿಕಟ್ಟೆ ಗ್ರಾಮದ 63 ವರ್ಷದ ವೃದ್ಧರೊಬ್ಬರಿಗೆ ಕೊರೊನಾ ಇರುವುದು ಖಚಿತವಾಗಿದೆ. ಅವರು ಬೆಂಗಳೂರಿಗೆ ಹೋಗಿ ಬಂದಿದ್ದರು.
ಜಿಲ್ಲೆಯಲ್ಲಿ ಒಟ್ಟು ಪ್ರಕರಣಗಳ ಸಂಖ್ಯೆ 297ಕ್ಕೇರಿದೆ. ಅದರಲ್ಲಿ ಏಳು ಮಂದಿ ಮೃತಪಟ್ಟಿದ್ದಾರೆ. ಸೋಮವಾರ ಬಿಡುಗಡೆಗೊಂಡ 11 ಮಂದಿ ಸೇರಿ ಒಟ್ಟು 257 ಮಂದಿ ಗುಣಮುಖರಾಗಿದ್ದಾರೆ. 33 ಸಕ್ರಿಯ ಪ್ರಕರಣಗಳಿವೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.