ಬಂಧನ
(ಪ್ರಾತಿನಿಧಿಕ ಚಿತ್ರ)
ದಾವಣಗೆರೆ: ಆಟವಾಡುತ್ತ ಮನೆಗೆ ಬಂದಿದ್ದ 7 ವರ್ಷದ ಬಾಲಕಿಯ ಮೇಲೆ ಇಬ್ಬರು ಬಾಲಕರು ಅತ್ಯಾಚಾರಕ್ಕೆ ಯತ್ನಿಸಿದ ಘಟನೆ ತಾಲ್ಲೂಕಿನ ಗ್ರಾಮವೊಂದರಲ್ಲಿ ಭಾನುವಾರ ನಡೆದಿದೆ.
ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇರೆಗೆ 17 ವರ್ಷ ಹಾಗೂ 15 ವರ್ಷದ ಇಬ್ಬರು ಬಾಲಕರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಸಂತ್ರಸ್ತ ಬಾಲಕಿಯನ್ನು ಚಿಕಿತ್ಸೆಗಾಗಿ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ.
ಪಕ್ಕದ ಮನೆಯ ಬಾಲಕಿ ಆಟವಾಡುತ್ತ 17 ವರ್ಷದ ಬಾಲಕನ ಮನೆಗೆ ಬಂದಿದ್ದಾಳೆ. ಈ ವೇಳೆ ಮನೆಯಲ್ಲಿದ್ದ 15 ವರ್ಷದ ಬಾಲಕ, ಬಾಲಕಿಯನ್ನು ಪುಸಲಾಯಿಸಿದ್ದಾನೆ. ಇಬ್ಬರು ಬಾಲಕರು ಸೇರಿ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ.
ಈ ವೇಳೆ ಬಾಲಕಿಯನ್ನು ಹುಡುಕಿಕೊಂಡು ಮನೆಗೆ ಬಂದ ತಾಯಿ, ಈ ದೃಶ್ಯವನ್ನು ಕಂಡು ಕಿರುಚಿದ್ದಾರೆ. ಸ್ಥಳಕ್ಕೆ ಧಾವಿಸಿದ ಜನರು ಬಾಲಕರನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ.
‘ಬಾಲಕಿಯ ಮೇಲೆ ಅತ್ಯಾಚಾರ ನಡೆದಿರುವುದು ಖಚಿತವಾಗಿಲ್ಲ. ಸಂತ್ರಸ್ತ ಬಾಲಕಿ ಹಾಗೂ ಬಾಲಕರನ್ನು ವೈದ್ಯಕೀಯ ತಪಾಸಣೆಗೆ ಒಳಪಡಿಸಲಾಗಿದೆ. ವೈದ್ಯಕೀಯ ವರದಿ ಆಧರಿಸಿ ಅತ್ಯಾಚಾರ ಪ್ರಕರಣ ದಾಖಲಿಸುವ ಕುರಿತು ನಿರ್ಧಾರ ಕೈಗೊಳ್ಳಲಾಗುವುದು’ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.