
ಪ್ರಜಾವಾಣಿ ವಾರ್ತೆ
ಬಂಧನ
ಪ್ರಜಾವಾಣಿ ವಾರ್ತೆ
ದಾವಣಗೆರೆ: ಬೈಕ್‌ನಲ್ಲಿ ಬಂದು ಚಿನ್ನದ ಆಭರಣ ಕಿತ್ತುಕೊಂಡು ಪರಾರಿಯಾಗಿದ್ದ ಇಬ್ಬರು ಆರೋಪಿಗಳನ್ನು ಬಂಧಿಸಿರುವ ಪೊಲೀಸರು, ₹1.80 ಲಕ್ಷ ಮೌಲ್ಯದ 14 ಗ್ರಾಂ ತೂಕದ ಮಾಂಗಲ್ಯ ಸರ ಹಾಗೂ ಕೃತ್ಯಕ್ಕೆ ಬಳಸಿದ ಒಂದು ಕೆಟಿಎಂ ಬೈಕ್ ವಶಪಡಿಸಿಕೊಂಡಿದ್ದಾರೆ.
ಹಾವೇರಿ ತಾಲ್ಲೂಕಿನ ಹೊಸರಿತ್ತಿ ಗ್ರಾಮದ ನಿವಾಸಿಗಳಾದ ನಿಯಾಜ್ ಅಹಮದ್ ಎಂ. ಹಾಗೂ ರಾಜು ಬಂಧಿತರು.
ಡಿಸೆಂಬರ್ 16ರಂದು ಚನ್ನಗಿರಿ ತಾಲ್ಲೂಕಿನ ಅರಿಶಿನಘಟ್ಟ ಗ್ರಾಮದ ಸರೋಜಮ್ಮ ಅವರು ಬಸವಾಪಟ್ಟಣ ಗ್ರಾಮದ ದುರ್ಗಮ್ಮ ದೇವಸ್ಥಾನಕ್ಕೆ ತೆರಳಿದ್ದಾಗ ಸೂಳೆಕೆರೆಯ ತೂಗು ಸೇತುವೆ ಬಳಿ ಬೈಕ್‌ನಲ್ಲಿ ಬಂದಿದ್ದ ಆರೋಪಿಗಳು ಬಂಗಾರದ ಸರ ಕಿತ್ತುಕೊಡು ಪರಾರಿಯಾಗಿದ್ದರು.
ಬಸವಾಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.