ADVERTISEMENT

ದಾವಣಗೆರೆ: ಸಚಿವ ಅಶ್ವತ್ಥನಾರಾಯಣ ವಜಾಗೊಳಿಸಲು ಕಾಂಗ್ರೆಸ್‌ ಆಗ್ರಹ

ಸಿದ್ದರಾಮಯ್ಯರನ್ನು ಹೊಡೆದು ಹಾಕುವಂತೆ ಪ್ರಚೋದನಕಾರಿ ಹೇಳಿಕೆ ನೀಡಿದ್ದ ಸಚಿವ

​ಪ್ರಜಾವಾಣಿ ವಾರ್ತೆ
Published 19 ಫೆಬ್ರುವರಿ 2023, 2:59 IST
Last Updated 19 ಫೆಬ್ರುವರಿ 2023, 2:59 IST
ಸಿದ್ದರಾಮಯ್ಯರನ್ನು ಹೊಡೆದು ಹಾಕಬೇಕು ಎಂಬ ಹೇಳಿಕೆ ನೀಡಿರುವ ಅಶ್ವತ್ಥನಾರಾಯಣ ಅವರನ್ನು ಸಚಿವ ಸ್ಥಾನದಿಂದ ವಜಾ ಮಾಡಬೇಕು ಎಂದು ಆಗ್ರಹಿಸಿ ಶನಿವಾರ ಜಿಲ್ಲಾ ಕಾಂಗ್ರೆಸ್‌ ವತಿಯಿಂದ ಪ್ರತಿಭಟನೆ ನಡೆಸಲಾಯಿತು
ಸಿದ್ದರಾಮಯ್ಯರನ್ನು ಹೊಡೆದು ಹಾಕಬೇಕು ಎಂಬ ಹೇಳಿಕೆ ನೀಡಿರುವ ಅಶ್ವತ್ಥನಾರಾಯಣ ಅವರನ್ನು ಸಚಿವ ಸ್ಥಾನದಿಂದ ವಜಾ ಮಾಡಬೇಕು ಎಂದು ಆಗ್ರಹಿಸಿ ಶನಿವಾರ ಜಿಲ್ಲಾ ಕಾಂಗ್ರೆಸ್‌ ವತಿಯಿಂದ ಪ್ರತಿಭಟನೆ ನಡೆಸಲಾಯಿತು   

ದಾವಣಗೆರೆ: ಟಿಪ್ಪು ಸುಲ್ತಾನ್ ಅವರನ್ನು ಹೊಡೆದು ಹಾಕಿದಂತೆ ಸಿದ್ದರಾಮಯ್ಯರನ್ನು ಹೊಡೆದು ಹಾಕಬೇಕು ಎಂಬ ಹೇಳಿಕೆ ನೀಡಿರುವ ಅಶ್ವತ್ಥ ನಾರಾಯಣ ಅವರನ್ನು ಸಚಿವ ಸ್ಥಾನದಿಂದ ವಜಾ ಮಾಡಬೇಕು ಎಂದು ಆಗ್ರಹಿಸಿ ಶನಿವಾರ ಜಿಲ್ಲಾ ಕಾಂಗ್ರೆಸ್‌ ಪ್ರತಿಭಟನೆ ನಡೆಸಿತು.

ದಾವಣಗೆರೆ ಜಯದೇವ ವೃತ್ತದಿಂದ ಆರಂಭಗೊಂಡ ಪ್ರತಿಭಟನಾ ಮೆರವಣಿಗೆ ಮಹಾನಗರ ಪಾಲಿಕೆ ಕಚೇರಿ ಮುಂಭಾಗ ತೆರಳಿ ಬಹಿರಂಗ ಸಭೆ ನಡೆಯಿತು.

ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎಚ್.ಬಿ. ಮಂಜಪ್ಪ ಮಾತನಾಡಿದರು.

ADVERTISEMENT

‘ಸಿದ್ದರಾಮಯ್ಯರ ವರ್ಚಸ್ಸನ್ನು ಸಹಿಸದ ಆರ್.ಎಸ್.ಎಸ್. ಮತ್ತು ಬಿಜೆಪಿಗರು ಅವರ ವಿರುದ್ಧ ಮಸಲತ್ತು ಮಾಡುತ್ತಿದ್ದಾರೆ’ ಎಂದು ಪ್ರಚಾರ ಸಮಿತಿ ಜಿಲ್ಲಾಧ್ಯಕ್ಷ ಶಾಮನೂರು ಟಿ. ಬಸವರಾಜ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೆ.ಜಿ. ಶಿವಕುಮಾರ್, ಮಹಾನಗರ ಪಾಲಿಕೆ ವಿರೋಧ ಪಕ್ಷದ ನಾಯಕ ಜಿ.ಎಸ್.ಮಂಜುನಾಥ್, ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಎಸ್. ಮಲ್ಲಿಕಾರ್ಜುನ್, ಮುಖಂಡ ಬಾಲಾಜಿ ಜವಹಾರ್ ಲಾಲ್ ಮಂಚ್‍ನ ಮೈನುದ್ದಿನ್ ಆಕ್ರೋಶ ವ್ಯಕ್ತಪಡಿಸಿದರು.

ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ದಿನೇಶ್ ಕೆ. ಶೆಟ್ಟಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಅಯುಬ್ ಪೈಲ್ವಾನ್, ಪಾಲಿಕೆ ಸದಸ್ಯ ಎ. ನಾಗರಾಜ್, ಉದಯಕುಮಾರ್, ಮಂಜುನಾಥ್ ಇಟ್ಟಿಗುಡಿ, ಆಶಾ ಉಮೇಶ್, ಟಿ.ಡಿ. ಹಾಲೇಶ್, ಎಚ್. ಗುರುರಾಜ್, ಮುಖಂಡರಾದ ಬಿಸ್ಲೇರಿ ಈರಣ್ಣ, ಕೆ.ಎಸ್. ಬಸವಂತಪ್ಪ, ಕುಕ್ಕವಾಡ ಮಂಜುನಾಥ್, ಮಾಯಕೊಂಡ ಹನುಮಂತಪ್ಪ, ಹರೀಶ್ ಕೆ.ಎಲ್. ಬಸಾಪುರ, ಶಿರಮನಹಳ್ಳಿ ರುದ್ರೇಶ್, ಎಚ್.ಜಯಣ್ಣ, ಸಾಗರ್ ಎಲ್.ಎಂ.ಎಚ್, ನಂಜಾನಾಯ್ಕ್‌, ಸಿದ್ದಪ್ಪ, ದ್ರಾಕ್ಷಾಯಣಮ್ಮ, ರಾಜೇಶ್ವರಿ, ಗೋಣಪ್ಪ, ಪರಶುರಾಮ್‌ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.