ದಾವಣಗೆರೆ: ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯದಲ್ಲಿ ಐವರು ನೌಕರರಿಗೆ ಕೊರೊನಾ ಪಾಸಿಟಿವ್ ಇರುವುದು ಪತ್ತೆಯಾಗಿದೆ. ಹಾಗಾಗಿ ನ್ಯಾಯಾಲಯವನ್ನು ಆ.4 ಮತ್ತು 5ರಂದು ಬಂದ್ ಮಾಡಲಾಗುತ್ತಿದೆ.
ನ್ಯಾಯಾಲಯವನ್ನು ಸಂಪೂರ್ಣ ಸ್ಯಾನಿಟೈಸ್ ಮಾಡಬೇಕಿರುವುದರಿಂದ ಎರಡು ದಿನಗಳ ಕಾಲ ಈ ಸಂಕೀರ್ಣದಲ್ಲಿರುವ ಎಲ್ಲ ನ್ಯಾಯಾಲಯಗಳನ್ನು ಮುಚ್ಚಲಾಗುವುದು ಎಂದು ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶರಾದ ಗೀತಾ ಕೆ.ಬಿ. ತಿಳಿಸಿದ್ದಾರೆ.
ಮುಖ್ಯ ಆಡಳಿತಾಧಿಕಾರಿ ಶ್ರೀಧರ್ ಹಾಗೂ ಶಿರಸ್ತೇದಾರ್ ಮಾರುತಿ ಎನ್. ನ್ಯಾಯಾಲಯದಲ್ಲಿ ಇರಲಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.