
ಪ್ರಜಾವಾಣಿ ವಾರ್ತೆ
ದಾವಣಗೆರೆ: ಇಲ್ಲಿನ ಪಿ.ಬಿ. ರಸ್ತೆಯ ಎಲ್‌ಐಸಿ ಕಚೇರಿ ಸಮೀಪದ ಗ್ಯಾರೇಜ್‌ನಲ್ಲಿ ಸೋಮವಾರ ಬೆಳಿಗ್ಗೆ ಸಂಭವಿಸಿದ ಅಗ್ನಿ ಅವಘಡದಲ್ಲಿ ನಾಲ್ಕು ಕಾರುಗಳು ಭಸ್ಮವಾಗಿವೆ.
ಬೆಳಿಗ್ಗೆ 7ಕ್ಕೆ ಕಾರುಗಳಿಗೆ ಬೆಂಕಿ ಹೊತ್ತಿಕೊಂಡು ಉರಿಯತೊಡಗಿವೆ. ಇದನ್ನು ಗಮನಿಸಿದ ಸಾರ್ವಜನಿಕರು ಅಗ್ನಿಶಾಮಕ ಠಾಣೆಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ಮತ್ತು ತುರ್ತುಸೇವಾ ಸಿಬ್ಬಂದಿ ಬೆಂಕಿ ಆರಿಸಿದ್ದಾರೆ.
‘ಗ್ಯಾರೇಜ್‌ಗೆ ಬಂದಿದ್ದ ಕಾರುಗಳನ್ನು ಹೊರಭಾಗದಲ್ಲಿ ನಿಲುಗಡೆ ಮಾಡಲಾಗಿತ್ತು. ಬೆಳಿಗ್ಗೆ ಸಂಭವಿಸಿದ ಅಗ್ನಿ ಅವಘಡದಲ್ಲಿ ನಾಲ್ಕು ಕಾರುಗಳು ಸುಟ್ಟು ಹೋಗಿವೆ’ ಎಂದು ಗ್ಯಾರೇಜ್ ಮಾಲೀಕ ಅರುಣ್ ಎಂ.ಆರ್. ಗಾಂಧಿನಗರ ಠಾಣೆಗೆ ದೂರು ನೀಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.