
ದಾವಣಗೆರೆ: ಜರ್ಮನ್ ಮಾದರಿಯಲ್ಲಿ ನೂತನವಾಗಿ ರೂಪಿಸಿರುವ ಗಾಂಧಿ ವೃತ್ತ ಸೇರಿದಂತೆ ದಕ್ಷಿಣ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಕೈಗೊಂಡ ಅಭಿವೃದ್ಧಿ ಕಾಮಗಾರಿಗಳಿಗೆ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ಅವರು ಭಾನುವಾರ ಚಾಲನೆ ನೀಡಿದರು.
₹ 5 ಕೋಟಿ ವೆಚ್ಚದಲ್ಲಿ ಹೊಸ ರೂಪದ ಪಡೆದ ಗಾಂಧಿ ವೃತ್ತ, ₹ 2 ಕೋಟಿ ವೆಚ್ಚದ ಅನ್ನದಾನೇಶ್ವರ ಮಠದ ಸಮುದಾಯ ಭವನದ ಭೂಮಿಪೂಜೆ, ₹ 1 ಕೋಟಿ ವೆಚ್ಚದಲ್ಲಿ ಹಿಂದೂ ರುದ್ರಭೂಮಿ ಅಭಿವೃದ್ಧಿ, ಕೆ.ಆರ್.ರಸ್ತೆಯ ಜಗಳೂರು ಬಸ್ ನಿಲ್ದಾಣದ ಸಮೀಪ ₹ 90 ಲಕ್ಷ ವೆಚ್ಚದಲ್ಲಿ ನಿರ್ಮಿಸಿದ ವಾಣಿಜ್ಯ ಮಳಿಗೆಗಳನ್ನು ಸಚಿವರು ಉದ್ಘಾಟಿಸಿದರು.
‘ಕ್ಷೇತ್ರದ ಅಭಿವೃದ್ಧಿ ಕಾಮಗಾರಿಗೆ ಶಾಸಕರೂ ಆಗಿದ್ದ ತಂದೆ ಶಾಮನೂರು ಶಿವಶಂಕರಪ್ಪ ಅವರು ಅನುದಾನ ನೀಡಿದ್ದರು. ಅನ್ನದಾನೇಶ್ವರ ಮಠದ ಕಾಮಗಾರಿಯನ್ನು ತ್ವರಿತಗತಿಯಲ್ಲಿ ಪೂರ್ಣಗೊಳಿಸಿ ಭಕ್ತರ ಬಳಕೆಗೆ ಅವಕಾಶ ಮಾಡಿಕೊಡುವಂತೆ ಹೇಳಿದ್ದೇನೆ’ ಎಂದು ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ಸುದ್ದಿಗಾರರಿಗೆ ತಿಳಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.