ದಾವಣಗೆರೆ : ಜಿಲ್ಲೆಯಲ್ಲಿ ಹೃದಯ ಸಂಬಂಧಿ ಕಾಯಿಲೆಯಿಂದ ಮೂವರು ಮೃತಪಟ್ಟಿದ್ದಾರೆ. ಜಯನಗರದ ಅಕ್ಷಯ್ (22), ಚಿಕ್ಕನಹಳ್ಳಿಯ ಹರೀಶ್ (54) ಹಾಗೂ ನಾಗರಕಟ್ಟೆಯ ಮಂಜ್ಯಾ ನಾಯ್ಕ (38) ಮೃತಪಟ್ಟವರು.
ಬುಧವಾರ ಬೆಳಿಗ್ಗೆ ಮನೆಯಲ್ಲಿ ಕುಳಿತಿದ್ದ ಅಕ್ಷಯ್, ಏಕಾಏಕಿ ಕುಸಿದು ಬಿದ್ದಿದ್ದಾರೆ. ಕುಟುಂಬದ ಸದಸ್ಯರು ತಕ್ಷಣ ಅವರನ್ನು ಆಸ್ಪತ್ರೆಗೆ ಸಾಗಿಸಿದ್ದಾರೆ. ಮಾರ್ಗ ಮಧ್ಯದಲ್ಲಿಯೇ ಅವರು ಮೃತಪಟ್ಟಿದ್ದಾರೆ ಎನ್ನಲಾಗಿದೆ.
ಹರೀಶ್ ಅವರಿಗೆ ಬುಧವಾರ ನಸುಕಿನಲ್ಲಿ ಎದೆನೋವು ಕಾಣಿಸಿಕೊಂಡಿದೆ. ಕುಟುಂಬದ ಸದಸ್ಯರು ಅವರನ್ನು ಆಸ್ಪತ್ರೆಗೆ ದಾಖಲಿಸುವ ಪ್ರಯತ್ನ ನಡೆಸಿದರೂ ಪ್ರಯೋಜವಾಗಿಲ್ಲ.
ದಾವಣಗೆರೆ ತಾಲ್ಲೂಕಿನ ನಾಗರಕಟ್ಟೆಯ ಮಂಜ್ಯಾ ನಾಯ್ಕ ಅವರಿಗೆ ಮಂಗಳವಾರ ಆಟೊ ಚಾಲನೆ ಮಾಡುತ್ತಿರುವಾಗಲೇ ಹೃದಯಾಘಾತವಾಗಿದೆ. ಆಸ್ಪತ್ರೆಗೆ ಕರೆತರುವ ಮಾರ್ಗ ಮಧ್ಯದಲ್ಲಿ ಮೃತಪಟ್ಟಿದ್ದಾರೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.