ADVERTISEMENT

ದಾವಣಗೆರೆ | ಚಿನ್ನಾಭರಣ ಕಳವು: ಮೂವರ ಬಂಧನ

​ಪ್ರಜಾವಾಣಿ ವಾರ್ತೆ
Published 9 ಜೂನ್ 2025, 15:46 IST
Last Updated 9 ಜೂನ್ 2025, 15:46 IST
<div class="paragraphs"><p>ಬಂಧನ (ಸಾಂದರ್ಭಿಕ ಚಿತ್ರ)</p></div>

ಬಂಧನ (ಸಾಂದರ್ಭಿಕ ಚಿತ್ರ)

   

ದಾವಣಗೆರೆ: ಚನ್ನಗಿರಿ ತಾಲ್ಲೂಕಿನ ಕಾರಿಗನೂರು ಗ್ರಾಮದ ಮನೆಯೊಂದರಲ್ಲಿ ಚಿನ್ನಾಭರಣ ಕಳವು ಮಾಡಿದ ಆರೋಪದ ಮೇರೆಗೆ ಮೂವರನ್ನು ಬಸವಾಪಟ್ಟಣ ಠಾಣೆಯ ಪೊಲೀಸರು ಬಂಧಿಸಿದ್ದಾರೆ.

ಕಾರಿಗನೂರು ಗ್ರಾಮದ ಹರೀಶ ನಾಯ್ಕ ಅಲಿಯಾಸ್‌ ಲೂಲಿ (22), ರವಿ ನಾಯ್ಕ (40) ಹಾಗೂ ಹರೀಶ ನಾಯ್ಕ (30) ಬಂಧಿತರು. ಆರೋಪಿಗಳಿಂದ ₹ 80 ಸಾವಿರ ಮೌಲ್ಯದ ಚಿನ್ನಾಭರಣವನ್ನು ಪೊಲೀಸರು ಜಪ್ತಿ ಮಾಡಿದ್ದಾರೆ.

ADVERTISEMENT

ಕಾರಿಗನೂರಿನ ವಿಜಯಲಕ್ಷ್ಮಿ ಎಂಬುವರು ಮೇ 21ರಂದು ಮಧ್ಯಾಹ್ನ ಸಂಬಂಧಿಕರ ಊರಿಗೆ ಹೋಗಿದ್ದರು. ಮನೆಯಲ್ಲಿ ಯಾರೂ ಇಲ್ಲದ ಸಮಯದಲ್ಲಿ ಹೆಂಚು ತೆಗೆದು ನುಗ್ಗಿದ ದುಷ್ಕರ್ಮಿಗಳು ಬೀರು ಬಾಗಿಲು ಮುರಿದು ₹ 1.30 ಲಕ್ಷ ಮೌಲ್ಯದ ಚಿನ್ನಾಭರಣ ಕಳವು ಮಾಡಿದ್ದರು.

ಪ್ರಕರಣ ದಾಖಲಿಸಿಕೊಂಡ ಬಸವಾಪಟ್ಟಣ ಠಾಣೆಯ ಪೊಲೀಸರು ಮೂವರು ಆರೋಪಿಗಳನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದರು. ಗ್ರಾಮದ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಬಳಿ ಆರೋಪಿಗಳು ಚಿನ್ನಾಭರಣ ಬಚ್ಚಿಟ್ಟಿದ್ದ ಸಂಗತಿ ತನಿಖೆಯಿಂದ ಗೊತ್ತಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.