ಮಳೆ
– ಎ.ಐ ಚಿತ್ರ
ದಾವಣಗೆರೆ: ಜಿಲ್ಲೆಯಲ್ಲಿ ಮಳೆ ಹೆಚ್ಚಾಗಿದ್ದು, ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಸೋಮವಾರ ಶಾಲೆಗಳಿಗೆ ರಜೆ ಘೋಷಣೆ ಮಾಡಿ ಜಿಲ್ಲಾಧಿಕಾರಿ ಜಿ.ಎಂ.ಗಂಗಾಧರಸ್ವಾಮಿ ಆದೇಶಿಸಿದ್ದಾರೆ.
ಜಿಲ್ಲೆಯಲ್ಲಿ ಭಾನುವಾರ ರಾತ್ರಿಯಿಂದ ಮಳೆ ಹೆಚ್ಚಾಗಿದೆ. ನಿರಂತರವಾಗಿ ಮಳೆ ಸುರಿಯುತ್ತಿರುವ ಪರಿಣಾಮವಾಗಿ ಜಿಲ್ಲಾಡಳಿತ ಈ ತೀರ್ಮಾನ ಕೈಗೊಂಡಿದೆ.
‘ಈ ದಿನ ಕೊರತೆಯಾಗುವ ಶೈಕ್ಷಣಿಕ ದಿನವನ್ನು ಆ. 23ರ ಶನಿವಾರದಂದು ಪೂರ್ಣ ದಿನ ಶಾಲೆಯನ್ನು ನಡೆಸಿ ಸರಿದೂಗಿಸಿಕೊಳ್ಳಲಾಗುವುದು’ ಎಂದು ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕ ಜಿ.ಕೊಟ್ರೇಶ್ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.