ದಾವಣಗೆರೆ: ಹರಿಹರ ತಾಲ್ಲೂಕಿನ ದೀಟೂರು ಗ್ರಾಮದ ಬಳಿಯ ತುಂಗಭದ್ರಾ ನದಿಯಲ್ಲಿ ಸ್ನಾನ ಮಾಡಲು ಹೋಗಿದ್ದಾಗ ನೀರಿನ ಸುಳಿಗೆ ಸಿಲುಕಿ ವ್ಯಕ್ತಿಯೊಬ್ಬರು ಮೃತಪಟ್ಟಿದ್ದಾರೆ.
ವಿಜಯನಗರ ಜಿಲ್ಲೆಯ ಕೊಟ‌್ಟೂರು ತಾಲ್ಲೂಕಿನ ಉಜ್ಜನಿ ಗ್ರಾಮದ ಸಿದ್ದೇಶ (31) ಮೃತಪಟ್ಟವರು. ಅವರು ದೀಟೂರಿನ ಪತ್ನಿ ಮನೆಗೆ ಬಂದಿದ್ದರು. ಮಂಗಳವಾರ ಸ್ನಾನ ಮಾಡಲು ನದಿಗೆ ಹೋಗಿದ್ದರು. ನೀರಿನ ಸುಳಿಗೆ ಸಿಲುಕಿದ್ದಾರೆ. ಬುಧವಾರ ಅವರ ಶವ ಪತ್ತೆಯಾಗಿದೆ.
ಹರಿಹರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.