ADVERTISEMENT

ಆನ್‌ಲೈನ್ ಯೋಗ ಸ್ಪರ್ಧೆಗೆ ಚಾಲನೆ ನೀಡಿದ ಡಿಸಿ, ಎಸ್‌ಪಿ

​ಪ್ರಜಾವಾಣಿ ವಾರ್ತೆ
Published 20 ಜೂನ್ 2021, 5:16 IST
Last Updated 20 ಜೂನ್ 2021, 5:16 IST
7ನೇ ಅಂತರರಾಷ್ಟ್ರೀಯ ಯೋಗ ದಿನಾಚರಣೆಯ ಪ್ರಯುಕ್ತ ಶನಿವಾರ ದಾವಣಗೆರೆ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಆನ್‌ಲೈನ್ ಮೂಲಕ 8 ವರ್ಷ ದಾಟಿದವರ ಯೋಗ ಸ್ಪರ್ಧೆಗೆ ಜಿಲ್ಲಾಧಿಕಾರಿ ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿ.ಬಿ.ರಿಷ್ಯಂತ್ ಚಾಲನೆ ನೀಡಿದರು.

ದಾವಣಗೆರೆ: 7ನೇ ಅಂತರರಾಷ್ಟ್ರೀಯ ಯೋಗ ದಿನಾಚರಣೆಯ ಪ್ರಯುಕ್ತ ಶನಿವಾರ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಆನ್‌ಲೈನ್ ಮೂಲಕ 8 ವರ್ಷ ದಾಟಿದವರ ಯೋಗ ಸ್ಪರ್ಧೆಗೆ ಜಿಲ್ಲಾಧಿಕಾರಿ ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿ.ಬಿ.ರಿಷ್ಯಂತ್ ಚಾಲನೆ ನೀಡಿದರು.

ವಿಡಿಯೊ ಕಾನ್ಫರೆನ್ಸ್ ಮೂಲಕ ಸ್ಫರ್ಧಿಗಳ ಯೋಗಾಸನವನ್ನು ವೀಕ್ಷಿಸಿದರು. ‘ಯೋಗಾಭ್ಯಾಸಗಳನ್ನು ಎಲ್ಲರೂ ಮತ್ತಷ್ಟು ಕರಗತ ಮಾಡಿಕೊಂಡು ಜಿಲ್ಲೆಗೆ ಕೀರ್ತಿ ತಂದುಕೊಡಬೇಕು’ ಎಂದು ತಿಳಿಸಿದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಆಯುಷ್ ಇಲಾಖೆ, ಜಿಲ್ಲಾ ವರದಿಗಾರರ ಕೂಟ ಹಾಗೂ ದಾವಣಗೆರೆ ಜಿಲ್ಲಾ ಯೋಗ ಒಕ್ಕೂಟ ಈ ಯೋಗ ಸ್ಪರ್ಧೆಯನ್ನು ಆಯೋಜಿಸಿತ್ತು.

ADVERTISEMENT

ಬಿ.ಎಸ್. ಚನ್ನಬಸಪ್ಪ ಆ್ಯಂಡ್ ಸನ್ಸ್ ಮಳಿಗೆ ಉದ್ಯಮಿ ಬಿ.ಸಿ.ಉಮಾಪತಿ, ಜಿಲ್ಲಾ ಯೋಗ ಒಕ್ಕೂಟದ ಪ್ರಧಾನ ಕಾರ್ಯದರ್ಶಿ ವಾಸುದೇವ್ ರಾಯ್ಕರ್, ಜಿಲ್ಲಾ ಆಯುಷ್ ಅಧಿಕಾರಿ ಡಾ.ಶಂಕರಗೌಡ, ಹಾಗೂ ಆಯುಷ್ ಇಲಾಖೆ ಮತ್ತು ಯೋಗ ಒಕ್ಕೂಟದ ಸದಸ್ಯರು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.