ADVERTISEMENT

ವಿಚಾರಣಾಧೀನ ಕೈದಿ ಅನಾರೋಗ್ಯದಿಂದ ಸಾವು

​ಪ್ರಜಾವಾಣಿ ವಾರ್ತೆ
Published 12 ನವೆಂಬರ್ 2020, 16:44 IST
Last Updated 12 ನವೆಂಬರ್ 2020, 16:44 IST
ಕೈಕೋಳ
ಕೈಕೋಳ   

ದಾವಣಗೆರೆ: ಕಳವು ಪ್ರಕರಣದಲ್ಲಿ ವಿಚಾರಣಾಧೀನ ಕೈದಿಯಾಗಿ ಜಿಲ್ಲಾ ಬಂದಿಖಾನೆಯಲ್ಲಿದ್ದ ವ್ಯಕ್ತಿ ಅನಾರೋಗ್ಯದಿಂದ ಮೃತಪಟ್ಟಿದ್ದಾರೆ.

ತುಮಕೂರು ಜಿಲ್ಲೆ ತಿಪಟೂರಿನ ದೇವರಾಜ್‌ (49) ಮೃತಪಟ್ಟವರು. ಒಂದು ವರ್ಷದಿಂದ ಅವರು ಜಿಲ್ಲಾ ಕಾರಾಗೃಹದಲ್ಲಿದ್ದರು. ಜ್ವರದಿಂದ ಬಳಲುತ್ತಿದ್ದ ಅವರನ್ನು ಜಿಲ್ಲಾ ಚಿಗಟೇರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಬುಧವಾರ ರಾತ್ರಿ ಚಿಕಿತ್ಸೆಗೆ ಸ್ಪಂದಿಸದೇ ಮೃತಪಟ್ಟಿದ್ದಾರೆ. ಬಸವಾನಗರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮ್ಯಾಜಿಸ್ಟೇಟ್‌ ತನಿಖೆ ಮುಗಿಸಿ ಮೃತದೇಹವನ್ನು ಕುಟುಂಬದವರು ಒಯ್ದಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT