ADVERTISEMENT

ಬಡವರಿಗೆ ನಿವೇಶನ ಶೀಘ್ರ ಘೋಷಣೆ: ಜಿಲ್ಲಾ ಉಸ್ತುವಾರಿ ಸಚಿವ ಬೈರತಿ ಬಸವರಾಜ ಹೇಳಿಕೆ

​ಪ್ರಜಾವಾಣಿ ವಾರ್ತೆ
Published 7 ಆಗಸ್ಟ್ 2020, 14:58 IST
Last Updated 7 ಆಗಸ್ಟ್ 2020, 14:58 IST
 ಬೈರತಿ ಬಸವರಾಜ 
 ಬೈರತಿ ಬಸವರಾಜ    

ದಾವಣಗೆರೆ: ಜಿಲ್ಲೆಯ ವಿವಿಧ ತಾಲ್ಲೂಕುಗಳಲ್ಲಿರುವ ಸರ್ಕಾರಿ ಜಮೀನು ಗುರುತಿಸಿ ಬಡವರಿಗೆ ನಿವೇಶನ ನೀಡುವ ಕುರಿತು ಶೀಘ್ರದಲ್ಲಿಯೇ ಘೋಷಣೆ ಮಾಡಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಬೈರತಿ ಬಸವರಾಜ ಹೇಳಿದರು.

ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಶಾಸಕರ ಒತ್ತಾಯದ ಮೇರೆಗೆ ಜಿಲ್ಲೆಯಲ್ಲಿ ಸರ್ಕಾರಿ ಭೂಮಿ ಜಮೀನು ಗುರುತಿಸಿ ಬಡವರಿಗೆ ನಿವೇಶನ ವಸತಿ ಕಲ್ಪಿಸಬೇಕು’ ಎಂದು ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಲಾಗಿದೆ’ ಎಂದರು.

ಸಚಿವ ಸಂಪುಟ ವಿಸ್ತರಣೆ ಮುಖ್ಯಮಂತ್ರಿಗಳ ವಿವೇಚನಗೆ ಬಿಟ್ಟಿದ್ದು, ಅವರು ಯಾವಾಗ ಬೇಕಾದರೂ ತೀರ್ಮಾನ ಕೈಗೊಳ್ಳಬಹುದು. ವಿರೋಧ ಪಕ್ಷದ ಆರೋಪಗಳಿಗೆ ಸಚಿವರು ಲೆಕ್ಕ ಕೊಟ್ಟಿದ್ದಾರೆ. ನ್ಯಾಯಾಂಗ ತನಿಖೆ ಅವಶ್ಯಕತೆ ಇಲ್ಲ. ಲೋಪದೋಷಗಳು ಆಗಿದ್ದರೆ ತಾನೇ ನ್ಯಾಯಾಂಗ ತನಿಖೆ ಮಾಡುವುದು. ದಾಖಲೆ ಒದಗಿಸಿದರೆ ಸರ್ಕಾರ ಕ್ರಮ ಕೈಗೊಳ್ಳುತ್ತೇವೆ’ ಎಂದರು.

ADVERTISEMENT

ಹರಿಹರ, ಹೊನ್ನಾಳಿ ಸೇರಿ ನದಿ ಪಕ್ಕದಲ್ಲಿರುವ ಹಳ್ಳಿಗಳಲ್ಲಿ ನೀರಿನ ಪ್ರಮಾಣ ಹೆಚ್ಚಾಗಿ ಪ್ರವಾಹ ಭೀತಿ ಉಂಟಾದರೆ ಅಲ್ಲಿರುವ ಜನರ ಸ್ಥಳಾಂತರ ಮಾಡಬೇಕು. ಜೊತೆಗೆ ಕಾಳಜಿ ಕೇಂದ್ರಗಳನ್ನು ತೆರೆಯುವ ಬಗ್ಗೆ ಜಿಲ್ಲಾಧಿಕಾರಿಗಳಿಗೆ ಸೂಚಿಸಿದ್ದೇನೆ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.