ಕಡರನಾಯ್ಕನಹಳ್ಳಿ: ಧರ್ಮಸ್ಥಳ ಕ್ಷೇತ್ರಕ್ಕೆ ಕಳಂಕ ತರುವ ಯತ್ನ ಮಾಡುತ್ತಿರುವವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಕರ್ನಾಟಕ ನವ ನಿರ್ಮಾಣ ಸೇನೆಯ ರಾಜ್ಯ ಘಟಕದ ಪ್ರಧಾನ ಕಾರ್ಯದರ್ಶಿ ಎಚ್.ಬಿ. ರುದ್ರಗೌಡ ಅವರು ಮುಖ್ಯಮಂತ್ರಿಗೆ ಪತ್ರ ಬರೆದಿದ್ದಾರೆ.
‘ಎಸ್‌ಐಟಿ ರಚಿಸಿರುವುದನ್ನು ನಾವು ಗೌರವಿಸುತ್ತೇವೆ. ಆದರೆ ನಿರಂತರವಾಗಿ ಹಿಂದೂ ಧಾರ್ಮಿಕ ಕೇಂದ್ರದ ವಿರುದ್ಧ ಸುಳ್ಳು ಆರೋಪಗಳನ್ನು ಮಾಡುತ್ತಿರುವವರ ವಿರುದ್ಧ ದೂರು ದಾಖಲಿಸಬೇಕು. ಅವರನ್ನು ಮಂಪರು ಪರೀಕ್ಷೆಗೆ ಒಳಪಡಿಸಿ ಷಡ್ಯಂತ್ರ ಬಯಲಿಗೆಳೆಯಬೇಕು’ ಎಂದು ಪತ್ರದಲ್ಲಿ ಒತ್ತಾಯಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.