ADVERTISEMENT

ಮಾಜಿ ಶಾಸಕ ಎಸ್‌.ರಾಮಪ್ಪ ವಿರುದ್ಧ ಕ್ರಮಕ್ಕೆ ಆಗ್ರಹ

​ಪ್ರಜಾವಾಣಿ ವಾರ್ತೆ
Published 26 ಆಗಸ್ಟ್ 2025, 7:49 IST
Last Updated 26 ಆಗಸ್ಟ್ 2025, 7:49 IST
<div class="paragraphs"><p>ವಿಧಾನಸೌಧ (ಸಾಂದರ್ಭಿಕ ಚಿತ್ರ)</p></div>

ವಿಧಾನಸೌಧ (ಸಾಂದರ್ಭಿಕ ಚಿತ್ರ)

   

ದಾವಣಗೆರೆ: ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸುವುದಾಗಿ ಹೇಳಿಕೆ ನೀಡಿದ ಮಾಜಿ ಶಾಸಕ ಎಸ್‌.ರಾಮಪ್ಪ ವಿರುದ್ಧ ವರಿಷ್ಠರು ಕ್ರಮ ಕೈಗೊಳ್ಳಬೇಕು ಎಂದು ಹರಿಹರ ತಾಲ್ಲೂಕು ಕಾಂಗ್ರೆಸ್ ಮುಖಂಡರು ಒತ್ತಾಯಿಸಿದರು.

‘ಕಾಂಗ್ರೆಸ್‌ ಟಿಕೆಟ್‌ ಸಿಗದಿದ್ದರೆ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸುವುದಾಗಿ ರಾಮಪ್ಪ ಬಹಿರಂಗ ಹೇಳಿಕೆ ನೀಡಿದ್ದಾರೆ. ಇದು ಪಕ್ಷ ವಿರೋಧಿಯಾಗಿದ್ದು, ಬ್ಲ್ಯಾಕ್‌ಮೇಲ್‌ ತಂತ್ರಗಾರಿಕೆಯಾಗಿದೆ’ ಎಂದು ಕಾಂಗ್ರೆಸ್ ಮುಖಂಡ ದಾದಾಪೀರ್ ಭಾವಿಹಾಳು ಸೋಮವಾರ ಸುದ್ದಿಗೋಷ್ಠಿಯಲ್ಲಿ ಆರೋಪಿಸಿದರು.

ADVERTISEMENT

‘ರಾಮಪ್ಪ ಅವರಿಗೆ ಕಾಂಗ್ರೆಸ್‌ ಮನ್ನಣೆ, ಗೌರವ ನೀಡಿದೆ. 2013ರಲ್ಲಿ ವೈ.ನಾಗಪ್ಪ ಬದಲು ರಾಮಪ್ಪ ಅವರಿಗೆ ಟಿಕೆಟ್‌ ನೀಡಿತ್ತು. ವಿಧಾನಸಭಾ ಚುನಾವಣೆಗೆ ಎರಡು ಬಾರಿ ಅವಕಾಶ ನೀಡಿದ್ದು, ನಗರಸಭೆ ಅಧ್ಯಕ್ಷರನ್ನಾಗಿಯೂ ಮಾಡಿತ್ತು. ಪಕ್ಷವಿರೋಧಿ ಚಟುವಟಿಕೆ ನಡೆಸಿದ ಕಾರಣಕ್ಕೆ 2023ರಲ್ಲಿ ಟಿಕೆಟ್‌ ಕೈತಪ್ಪಿತ್ತು’ ಎಂದು ದೂರಿದರು.

ಕೆಪಿಸಿಸಿ ರಾಜ್ಯ ಕಾರ್ಯದರ್ಶಿ ಅಬುತಾಹೀರ್, ಶ್ರೀನಿಧಿ, ಬಸವರಾಜ್, ಮಂಜುನಾಥ್, ಕೃಷ್ಣಮೂರ್ತಿ, ಕರಿಬಸಪ್ಪ, ರೇವಣಸಿದ್ದಪ್ಪ ಹಾಜರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.