ಹರಪನಹಳ್ಳಿ: ಹರಪನಹಳ್ಳಿ ಜಿಲ್ಲೆಯನ್ನಾಗಿ ಘೋಷಣೆ ಮಾಡಬೇಕು ಎಂದು ಆಗ್ರಹಿಸಿ ಜಿಲ್ಲಾ ಹೋರಾಟ ಸಮಿತಿ ಮತ್ತು ಪ್ರಗತಿಪರ ಸಂಘಟನೆಗಳ ನೇತೃತ್ವದಲ್ಲಿ ಸೆ.21ರಂದು ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ.
ಇಂದು ಬೆಳಿಗ್ಗೆ 10ಕ್ಕೆ ಪ್ರವಾಸಿ ಮಂದಿರ ವೃತ್ತದಿಂದ ಪ್ರತಿಭಟನಾ ಮೆರವಣಿಗೆ ನಡೆಸಿ, ರಾಜ್ಯ ಹೆದ್ದಾರಿ ತಡೆದು ಸರ್ಕಾರವನ್ನು ಒತ್ತಾಯಿಸಲಾಗುವುದು. ಸರ್ಕಾರ ದುಡುಕಿನ ನಿರ್ಧಾರ ಕೈಬಿಟ್ಟು, ಬಳ್ಳಾರಿ ಜಿಲ್ಲಾ ಕೇಂದ್ರದಿಂದ 150 ಕಿ.ಮೀ. ದೂರದಲ್ಲಿರುವ ಹರಪನಹಳ್ಳಿಯನ್ನೇ ಜಿಲ್ಲಾ ಕೇಂದ್ರವನ್ನಾಗಿ ಘೋಷಿಸಬೇಕು ಎಂದು ಒತ್ತಾಯಿಸಲಾಗುವುದು.ಪ್ರತಿಭಟನೆಯಲ್ಲಿ ಮಠಾಧೀಶರು, ಸಾಹಿತಿಗಳು, ವಿದ್ಯಾರ್ಥಿಗಳು ಪಾಲ್ಗೊಳ್ಳಲಿದ್ದಾರೆ ಎಂದು ಸಮಿತಿಯ ಸಂಚಾಲಕ ಹೊಸಳ್ಳಿ ಮಲ್ಲೇಶ್ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.