ADVERTISEMENT

ದಾವಣಗೆರೆ | ಪರೀಕ್ಷೆ ವೇಳೆ ಕರ್ತವ್ಯ ಲೋಪ: ಮೇಲ್ವಿಚಾರಕ ಅಮಾನತು

​ಪ್ರಜಾವಾಣಿ ವಾರ್ತೆ
Published 28 ಮಾರ್ಚ್ 2024, 5:07 IST
Last Updated 28 ಮಾರ್ಚ್ 2024, 5:07 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ದಾವಣಗೆರೆ: ಎಸ್‌ಎಸ್‌ಎಲ್‌ಸಿ ಪರೀಕ್ಷಾ ಕೊಠಡಿಯಲ್ಲಿ ಕರ್ತವ್ಯದಲ್ಲಿ ನಿರ್ಲಕ್ಷ್ಯ ವಹಿಸಿದ ಕಾರಣಕ್ಕೆ ಇಲ್ಲಿನ ಹರಿಹರ ಎಂಕೆಇಟಿಎಲ್‌ಕೆ ಪರೀಕ್ಷಾ ಕೇಂದ್ರ ಕೊಠಡಿ ಮೇಲ್ವಿಚಾರಕರೊಬ್ಬರನ್ನ ಅಮಾನತು ಮಾಡಿ ಜಿಲ್ಲಾ ಪಂಚಾಯಿತಿ ಸಿಇಒ ಸುರೇಶ್ ಇಟ್ನಾಳ್ ಆದೇಶಿಸಿದ್ದಾರೆ.

ಹರಿಹರ ತಾಲ್ಲೂಕು ಬನ್ನಿಕೋಡು ಕರ್ನಾಟಕ ಪಬ್ಲಿಕ್ ಸ್ಕೂಲ್ ಚಿತ್ರಕಲಾ ಶಿಕ್ಷಕ ರಿಯಾಜ್ ಅಹಮದ್ ಅಮಾನತುಗೊಂಡವರು.

ಬುಧವಾರ ಸಮಾಜ ವಿಜ್ಞಾನ ವಿಷಯದ ಪರೀಕ್ಷೆ ನಡೆಯುತ್ತಿದ್ದ ವೇಳೆ ರಿಯಾಜ್ ಅಹಮದ್ ಪರೀಕ್ಷಾ ಮೇಲ್ವಿಚಾರಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಕೊಠಡಿಯಲ್ಲಿ ವಿದ್ಯಾರ್ಥಿಗಳು ಒಬ್ಬರಿಗೊಬ್ಬರು ಹಿಂದೆ, ಮುಂದಿನ ಬೆಂಚ್‌ನ ವಿದ್ಯಾರ್ಥಿಗಳೊಂದಿಗೆ ಸಂಭಾಷಣೆಯಲ್ಲಿ ತೊಡಗಿದ್ದರೂ ಮೇಲ್ವಿಚಾರಕರಾಗಿದ್ದ ಪರೀಕ್ಷಾ ಶಿಸ್ತು, ಗೋಪ್ಯತೆಯನ್ನು ಕಾಪಾಡಿಕೊಳ್ಳುವಲ್ಲಿ ವಿಫಲವಾದರು. ಪ್ರತಿ ಪರೀಕ್ಷಾ ಕೇಂದ್ರದ ಕೊಠಡಿಯಲ್ಲಿ ವೆಬ್ ಕಾಸ್ಟಿಂಗ್ ಮಾಡಲಾಗಿದ್ದು, ನೇರ ದೃಶ್ಯಾವಳಿಗಳನ್ನು ವೀಕ್ಷಿಸಿದ ಶಿಕ್ಷಣ ಇಲಾಖೆಯ ಆಯುಕ್ತರು ನೀಡಿದ ನಿರ್ದೇಶನದ ಮೇರೆಗೆ ಸಿಇಒ ಈ ಕ್ರಮ ಕೈಗೊಂಡಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.