
ದಾವಣಗೆರೆ: ‘ಟೀಕಾಕಾರರಿಗೆ ದಾವಣಗೆರೆ ನಗರ ಮತ್ತು ಜಿಲ್ಲೆಯನ್ನು ಅಭಿವೃದ್ಧಿ ಮಾಡುವ ಮೂಲಕ ಪ್ರತ್ಯುತ್ತರ ನೀಡುತ್ತೇವೆ’ ಎಂದು ಜಿಲ್ಲಾ ಉಸ್ತುವಾರಿ ಸಚಿವ ಸಚಿವ ಎಸ್.ಎಸ್.ಮಲ್ಲಿಕಾರ್ಜುನ್ ಹೇಳಿದರು.
ನಗರದ ಕಾಯಿಪೇಟೆಯಲ್ಲಿರುವ ಬಸವೇಶ್ವರ ದೇವಸ್ಥಾನದ ಬಳಿ ‘ಧೂಡಾ’ ವತಿಯಿಂದ ₹6.09 ಕೋಟಿ ಮೊತ್ತದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶನಿವಾರ ಚಾಲನೆ ನೀಡಿ ಮಾತನಾಡಿದರು.
‘ಕೊಂಡಜ್ಜಿ ರಸ್ತೆ ಹಾಗೂ ಎಂ.ಬಿ.ಕೆರೆಯಲ್ಲಿರುವ ರಸ್ತೆಗೆ ಕಮಾನು ನಿರ್ಮಿಸಲಾಗುವುದು. ಕಾಯಿಪೇಟೆ ಪಾತಾಳಲಿಂಗೇಶ್ವರ ದೇವಸ್ಥಾನಕ್ಕೆ ಕಮಾನು ನಿರ್ಮಿಸಿ, ಅಲಂಕಾರಿಕ ದೀಪಗಳನ್ನು ಅಳವಡಿಸಲಾಗುವುದು’ ಎಂದು ತಿಳಿಸಿದರು.
ರಸ್ತೆಗಳ ಅಭಿವೃದ್ಧಿ, ಎಲ್‌ಇಡಿ ದೀಪಗಳ ಅಳವಡಿಕೆ, ಶುದ್ಧ ನೀರಿನ ಘಟಕಗಳ ಸ್ಥಾಪನೆ ಸೇರಿದಂತೆ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಲಾಯಿತು.
ಸಂಸದೆ ಡಾ. ಪ್ರಭಾ ಮಲ್ಲಿಕಾರ್ಜುನ್, ‘ಧೂಡಾ’ ಅಧ್ಯಕ್ಷ ದಿನೇಶ್ ಶೆಟ್ಟಿ, ಸದಸ್ಯರಾದ ವಾಣಿ ಬಕ್ಕೇಶ್, ಮಂಜುನಾಥ್, ಜಬ್ಬಾರ್ ಖಾನ್, ಆಯುಕ್ತ ಹುಲ್ಮನಿ ತಿಮ್ಮಣ್ಣ, ಕಾರ್ಯಪಾಲಕ ಎಂಜಿನಿಯರ್ ಪರಮೇಶ್ವರ ನಾಯ್ಕ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಅಯೂಬ್ ಪೈಲ್ವಾನ್, ಬಿ.ಕೆ. ಪರಶುರಾಮ್, ಡಿಸಿಸಿ ಬ್ಯಾಂಕ್ ಸದಸ್ಯ ಮುದೇಗೌಡ್ರು ಗಿರೀಶ್, ಗ್ಯಾರಂಟಿ ಯೋಜನೆ ತಾಲ್ಲೂಕು ಘಟಕದ ಅಧ್ಯಕ್ಷ ಉಮೇಶ್, ಪಾಲಿಕೆಯ ಮಾಜಿ ಸದಸ್ಯರು, ನಾಮ ನಿರ್ದೇಶಿತ ಸದಸ್ಯರು, ದೊಡ್ಡಬಾತಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಮಂಜುಳಾ ಹನುಮಂತಪ್ಪ, ಉಪಾಧ್ಯಕ್ಷರು, ಸದಸ್ಯರು ಪಾಲ್ಗೊಂಡಿದ್ದರು.