ಹೊನ್ನಾಳಿ: ಸೆ. 1ರಂದು ಬೆಳಿಗ್ಗೆ ಜಿಲ್ಲಾ ಕೇಂದ್ರ ಮತ್ತು ಹೊನ್ನಾಳಿ–ನ್ಯಾಮತಿ ಭಾಗದಿಂದ 10 ಸಾವಿರಕ್ಕೂ ಹೆಚ್ಚು ಜನರು ಧರ್ಮಸ್ಥಳ ಚಲೊ ಕಾರ್ಯಕ್ರಮಕ್ಕೆ ತೆರಳಲಿದ್ದಾರೆ. ಆಸಕ್ತರು ಕೇಸರಿ ಶಾಲು ಹಾಗೂ ಕೇಸರಿ ಧ್ವಜದೊಂದಿಗೆ ಬರಬೇಕು. ಮಧ್ಯಾಹ್ನ 1 ಗಂಟೆಗೆ ಧರ್ಮಸ್ಥಳದಲ್ಲಿ ಸೇರಬೇಕು ಎಂದು ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ ಹೇಳಿದರು.
ಶುಕ್ರವಾರ ಇಲ್ಲಿನ ತಮ್ಮ ನಿವಾಸದಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದರು.
ಧರ್ಮಸ್ಥಳದ ವಿಚಾರದಲ್ಲಿ ಎಸ್‍ಐಟಿ ತನಿಖೆಗೆ ಆದೇಶ ನೀಡಿದ ಮುಖ್ಯಮಂತ್ರಿ, ಗೃಹಸಚಿವ ಮತ್ತು ಹಿಂದೂಗಳ ಭಾವನೆಗೆ ಧಕ್ಕೆ ತಂದಿರುವ ಡಿ.ಕೆ.ಶಿವಕುಮಾರ್ ಅವರು ರಾಜ್ಯದ ಜನತೆಯ ಕ್ಷಮೆ ಕೇಳಬೇಕು ಎಂದು ಆಗ್ರಹಿಸಿದರು.
ಬಿಜೆಪಿ ತಾಲ್ಲೂಕು ಘಟಕದ ಅಧ್ಯಕ್ಷ ಅರಕೆರೆ ನಾಗರಾಜ್, ಮುಖಂಡ ಇಂಚರ ಮಂಜುನಾಥ್, ನಾಗರಾಜ್ ಮಾದೇನಹಳ್ಳಿ, ಮಾರುತಿನಾಯ್ಕ, ಸಿ.ಆರ್. ಶಿವಾನಂದ್ ಸೇರಿದಂತೆ ನೂರಾರು ಕಾರ್ಯಕರ್ತರು ಹಾಜರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.