ನ್ಯಾಮತಿ: ಪಟ್ಟಣದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಸೋಮವಾರ ಡಯಾಲಿಸಿಸ್ ಸೇವೆ ಆರಂಭಿಸಲಾಯಿತು.
ಬಿಪಿಎಲ್ ಮತ್ತು ಎಪಿಎಲ್ ಕಾರ್ಡ್ ಹೊಂದಿರುವವರು ಉಚಿತವಾಗಿ ಈ ಸೇವೆ ಪಡೆಯಬಹುದು. ತಾಲ್ಲೂಕು ಕೇಂದ್ರದಲ್ಲಿ ಇದರ ಅವಶ್ಯಕತೆ ಇದ್ದು, ಬಡ ರೋಗಿಗಳಿಗೆ ತುಂಬಾ ಅನುಕೂಲವಾಗಿದೆ. ಇದರ ಸದುಪಯೋಗವನ್ನು ಪಡೆಯಬೇಕು ಎಂದು ವೈದ್ಯಾಧಿಕಾರಿ ರೇವಣಸಿದ್ದಪ್ಪ ಮೆಣಸಿನಕಾಯಿ ಮನವಿ ಮಾಡಿದರು.
ರೋಗಿಗಳು ಹೆಸರು ನೋಂದಾಯಿಸಲು ಡಯಾಲಿಸಿಸ್ ಕೇಂದ್ರದ ಮುಖ್ಯಸ್ಥ ಟಿ. ಹುಲುಗಪ್ಪ (9740379143), ಸಿಬ್ಬಂದಿ ಪುನೀತ್ (6362964589) ಅವರನ್ನು ಸಂಪರ್ಕಿಸಬಹುದು ಎಂದು ತಿಳಿಸಿದರು.
ವೈದ್ಯ ತೇಜಸ್ವಿ, ಸಿಬ್ಬಂದಿ, ಸಾರ್ವಜನಿಕರು ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.