ADVERTISEMENT

ಶಿಕ್ಷಕಿಯ ಡಿಜಿಟಲ್‌ ಅರೆಸ್ಟ್‌, ₹22.40 ಲಕ್ಷ ಸುಲಿಗೆ;ಹಾಸನದಲ್ಲಿ ಯುವ ರೈತನ ಬಂಧನ

​ಪ್ರಜಾವಾಣಿ ವಾರ್ತೆ
Published 27 ಆಗಸ್ಟ್ 2025, 15:33 IST
Last Updated 27 ಆಗಸ್ಟ್ 2025, 15:33 IST
<div class="paragraphs"><p>ಬಂಧನ  </p></div>

ಬಂಧನ

   

(ಪ್ರಾತಿನಿಧಿಕ ಚಿತ್ರ)

ದಾವಣಗೆರೆ: ಶಿಕ್ಷಕಿಯೊಬ್ಬರನ್ನು ಡಿಜಿಟಲ್ ಅರೆಸ್ಟ್‌ ಮಾಡಿ ₹ 22.40 ಲಕ್ಷ ಸುಲಿಗೆ ಮಾಡಿದ್ದ ಆರೋಪದಲ್ಲಿ ‘ಸೆನ್’ (ಆರ್ಥಿಕ, ಸೈಬರ್ ಹಾಗೂ ಮಾದಕವಸ್ತು ಅಪರಾಧ) ಠಾಣೆಯ ಪೊಲೀಸರು ಹಾಸನ ಜಿಲ್ಲೆಯ ಯುವ ರೈತನೊಬ್ಬನನ್ನು ಬಂಧಿಸಿದ್ದಾರೆ.

ADVERTISEMENT

ಬೇಲೂರು ತಾಲ್ಲೂಕಿನ ಕೋರಟಿಕೆರೆ ಗ್ರಾಮದ ಅರುಣ್ ಕುಮಾರ್ (35) ಬಂಧಿತ ಆರೋಪಿ. ಬಂಧಿತನನ್ನು ನ್ಯಾಯಾಧೀಶರ ಎದುರು ಹಾಜರುಪಡಿಸಿ ₹ 1.90 ಲಕ್ಷ ಇರುವ ಬ್ಯಾಂಕ್ ಖಾತೆಯನ್ನು ಫ್ರೀಜ್‌ ಮಾಡಿದ್ದಾರೆ. ಇನ್ನೂ ಇಬ್ಬರು ಆರೋಪಿಗಳು ತಲೆಮರೆಸಿಕೊಂಡಿದ್ದಾರೆ.

‘ಫೆ.5ರಂದು ಶಿಕ್ಷಕಿಗೆ ದೂರವಾಣಿ ಕರೆ ಮಾಡಿದ ಆರೋಪಿಗಳು ಮುಂಬೈ ಬ್ಲೂಡಾಟ್ ಕೋರಿಯರ್ ಹೆಸರಿನಲ್ಲಿ ಪರಿಚಯಿಸಿಕೊಂಡಿದ್ದರು.‌ ದುಬೈಗೆ ಕಳುಹಿಸುತ್ತಿರುವ ಪಾರ್ಸಲ್‌ನಲ್ಲಿ‌ ಔಷಧಗಳ ಜೊತೆಗೆ ಮಾದಕವಸ್ತು ಪತ್ತೆಯಾಗಿದ್ದು, ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸುವುದಾಗಿ ಬೆದರಿಸಿದ್ದರು. ಆಧಾರ್ ಕಾರ್ಡ್‌ ಹಾಗೂ ಇ-ಮೇಲ್ ವಿಳಾಸ ಪಡೆದುಕೊಂಡಿದ್ದರು’ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

‘ವಾಟ್ಸ್‌ಆಪ್‌ ಕಾಲ್ ಮಾಡಿದ ಮಹಿಳೆಯೊಬ್ಬರು ಡಿಸಿಪಿ ಎಂಬುದಾಗಿ ಪರಿಚಯಿಸಿಕೊಂಡು ಶಿಕ್ಷಕಿಯನ್ನು ಡಿಜಿಟಲ್ ಅರೆಸ್ಟ್‌ ಮಾಡಿದ್ದಾರೆ. ಹವಾಲಾ ಹಣ ವರ್ಗಾವಣೆಯಲ್ಲಿ ಬಂಧಿತನಾಗಿರುವ ಆರೋಪಿಯ ಬಳಿ ಶಿಕ್ಷಕಿಯ ಬ್ಯಾಂಕ್ ಖಾತೆಯ ವಿವರ ಹಾಗೂ ಎಟಿಎಂ ಕಾರ್ಡ್ ಪತ್ತೆಯಾಗಿರುವುದಾಗಿ ಬೆದರಿಸಿದ್ದಾರೆ. ಬ್ಯಾಂಕ್ ಖಾತೆಯ ಕಾನೂನಾತ್ಮಕ ತೊಡಕುಗಳನ್ನು ನಿವಾರಿಸಲು ₹ 22.40 ಲಕ್ಷಗಳನ್ನು ಎರಡು ಬ್ಯಾಂಕ್ ಖಾತೆಗಳಿಗೆ ವರ್ಗಾವಣೆ ಮಾಡಿಸಿಕೊಂಡಿದ್ದಾರೆ’ ಎಂದು ಪೊಲೀಸರು ವಿವರಿಸಿದ್ದಾರೆ.

ಈ ಸಂಬಂಧ ಮಾರ್ಚ್ 12ರಂದು ಶಿಕ್ಷಕಿ ‘ಸೆನ್’ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಪ್ರಕರಣದ ತನಿಖೆ ನಡೆಸಿದ ಡಿವೈಎಸ್‌ಪಿ ಬಂಕಾಳಿ ನಾಗಪ್ಪ ನೇತೃತ್ವದ ಪೊಲೀಸರು ಒಬ್ಬ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ತಲೆ ಮರೆಸಿಕೊಂಡಿರುವ ಇನ್ನೂ ಇಬ್ಬರು ಆರೋಪಿಗಳ ಬಂಧನಕ್ಕೆ ಬಲೆ ಬೀಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.