ADVERTISEMENT

30 ಮಂದಿ ಆಸ್ಪತ್ರೆಯಿಂದ ಬಿಡುಗಡೆ: ಜಿಲ್ಲಾಧಿಕಾರಿ

​ಪ್ರಜಾವಾಣಿ ವಾರ್ತೆ
Published 5 ಏಪ್ರಿಲ್ 2020, 9:58 IST
Last Updated 5 ಏಪ್ರಿಲ್ 2020, 9:58 IST

ದಾವಣಗೆರೆ: ಕೊರೊನಾ ವೈರಸ್ ಸಂಬಂಧ ಶನಿವಾರ ಇಬ್ಬರು ಸೇರಿ ಇದುವರೆಗೂ 30 ಜನರು ಸೂಕ್ತ ಚಿಕಿತ್ಸೆ ಪಡೆದು ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ ಎಂದು ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ತಿಳಿಸಿದ್ದಾರೆ.

‘ಕೊರೊನಾ ವೈರಸ್ ಪರೀಕ್ಷೆಗಾಗಿ ಕಳುಹಿಸಿದ್ದ 2 ಮಾದರಿಗಳ ಫಲಿತಾಂಶ ಆರೋಗ್ಯ ಇಲಾಖೆಯ ಕೈಸೇರಿದ್ದು, ನೆಗೆಟಿವ್ ಬಂದಿವೆ. ಇದುವರೆಗೆ ಕಳುಹಿಸಿದ್ದ 62 ಮಾದರಿಗಳಲ್ಲಿ 49 ಮಾದರಿಗಳ ಫಲಿತಾಂಶ ನೆಗೆಟಿವ್ ಬಂದಿದೆ’ ಎಂದು ತಿಳಿಸಿದ್ದಾರೆ.

‘ಶನಿವಾರ 12 ಮಂದಿ ಸೇರಿ ಈವರೆಗೆ ಒಟ್ಟು 72 ಮಂದಿ 28 ದಿನಗಳ ಅವಲೋಕನ ಅವಧಿಯನ್ನು ಪೂರ್ಣಗೊಳಿಸಿದ್ದು, ಹೊಸದಾಗಿ 15 ಮಂದಿ ಸೇರಿ ಈವರೆಗೆ 277 ಮಂದಿ 14 ದಿನಗಳ ಅವಲೋಕನ ಅವಧಿಯನ್ನು ಪೂರ್ಣಗೊಳಿಸಿದ್ದಾರೆ. ಒಟ್ಟು 45 ಜನರನ್ನು ಮನೆಯಲ್ಲೇ ಪ್ರತ್ಯೇಕವಾಗಿ ಇರಿಸಲ್ಪಟ್ಟಿದ್ದು, 33 ಜನರನ್ನು ಆಸ್ಪತ್ರೆಯಲ್ಲಿ ಪ್ರತ್ಯೇಕವಾಗಿ ಇರಿಸಲಾಗಿದೆ. 12 ಮಂದಿಯನ್ನು ಸೂಪರ್‍ವೈಸ್ಡ್ ಕ್ವಾರೈಂಟೈನ್‍ನಲ್ಲಿ ಇರಿಸಲಾಗಿದೆ ಎಂದು ತಿಳಿಸಿದ್ದಾರೆ.

ADVERTISEMENT

ಹೊರದೇಶಗಳಲ್ಲಿ ಶಾಶ್ವತವಾಗಿ ನೆಲೆಸಿರುವ ವಿದೇಶಿಗರು ಜಿಲ್ಲೆಗೆ ಬಂದು ಮತ್ತೆ ಹೊರದೇಶಗಳಿಗೆ ಇದುವರೆಗೆ 9 ಜನರು ತೆರಳಿದ್ದಾರೆ. ವಿದೇಶಗಳಿಗೆ ಭೇಟಿ ನೀಡಿ ನಮ್ಮ ಜಿಲ್ಲೆಗೆ ಬಂದು ಇತರೆ ಜಿಲ್ಲೆಗಳಿಗೆ ಇದುವರೆಗೆ 15 ಜನ ತೆರಳಿದ್ದಾರೆ ಎಂದು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.