ADVERTISEMENT

ಕಾರ್ಮಿಕರಿಗೆ ಕಿಟ್ ವಿತರಿಸಿ ಕಾರ್ಮಿಕ ದಿನಾಚರಣೆ

​ಪ್ರಜಾವಾಣಿ ವಾರ್ತೆ
Published 1 ಮೇ 2020, 16:13 IST
Last Updated 1 ಮೇ 2020, 16:13 IST
ದಾವಣಗೆರೆ ಜಿಲ್ಲಾ ಬ್ಯಾಂಕ್‌ ನೌಕರರ ಸಂಘಗಳಿಂದ ಕಾರ್ಮಿಕರಿಗೆ ಆಹಾರದ ಕಿಟ್‌ಗಳನ್ನು ವಿತರಿಸುವ ಮೂಲಕ ಕಾರ್ಮಿಕರ ದಿನಾಚರಣೆಯನ್ನು ಆಚರಿಸಲಾಯಿತು. ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ, ಕಾರ್ಮಿಕ ಮುಖಂಡ ಎಚ್.ಕೆ.ರಾಮಚಂದ್ರಪ್ಪ, ರಾಘವೇಂದ್ರ ನಾಯರಿ ಇದ್ದಾರೆ.
ದಾವಣಗೆರೆ ಜಿಲ್ಲಾ ಬ್ಯಾಂಕ್‌ ನೌಕರರ ಸಂಘಗಳಿಂದ ಕಾರ್ಮಿಕರಿಗೆ ಆಹಾರದ ಕಿಟ್‌ಗಳನ್ನು ವಿತರಿಸುವ ಮೂಲಕ ಕಾರ್ಮಿಕರ ದಿನಾಚರಣೆಯನ್ನು ಆಚರಿಸಲಾಯಿತು. ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ, ಕಾರ್ಮಿಕ ಮುಖಂಡ ಎಚ್.ಕೆ.ರಾಮಚಂದ್ರಪ್ಪ, ರಾಘವೇಂದ್ರ ನಾಯರಿ ಇದ್ದಾರೆ.   

ದಾವಣಗೆರೆ: ಕರ್ನಾಟಕ ಪ್ರದೇಶ್ ಬ್ಯಾಂಕ್ ಎಂಪ್ಲಾಯೀಸ್ ಫೆಡರೇಶನ್‌ ಮತ್ತು ದಾವಣಗೆರೆ ಜಿಲ್ಲಾ ಬ್ಯಾಂಕ್‌ ನೌಕರರ ಸಂಘಗಳಿಂದ ಆರ್ಥಿಕವಾಗಿ ಸಂಕಷ್ಟಕ್ಕೊಳಗಾಗಿರುವ ಕಾರ್ಮಿಕ ವರ್ಗಕ್ಕೆ ₹1ಸಾವಿರ ಮೌಲ್ಯದ ಆಹಾರದ ಕಿಟ್‌ಗಳನ್ನು 75 ಕಾರ್ಮಿಕರಿಗೆ ವಿತರಿಸುವ ಮೂಲಕ ವಿಶಿಷ್ಟ ರೀತಿಯಲ್ಲಿ ವಿಶ್ವ ಕಾರ್ಮಿಕರ ದಿನಾಚರಣೆಯನ್ನು ಆಚರಿಸಲಾಯಿತು.

ಆಹಾರ ಧಾನ್ಯಗಳ ಕಿಟ್‌ಗಳನ್ನು ವಿತರಿಸಿದ ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಮಾತನಾಡಿ, ‘ಕೊರೊನಾ ಸಂದರ್ಭ ಬ್ಯಾಂಕ್‌ ನೌಕರರು ಧೈರ್ಯವಾಗಿ ಕೆಲಸ ಮಾಡಿ ಸರ್ಕಾರದ ಯೋಜನೆಗಳನ್ನು ಗ್ರಾಹಕರಿಗೆ ತಲುಪಿಸುತ್ತಿದ್ದಾರೆ’ ಎಂದರು.

ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಹನುಮಂತರಾಯ, ಲೀಡ್ ಬ್ಯಾಂಕ್ ವಿಭಾಗೀಯ ಪ್ರಬಂಧಕ ಸುಶೃತ್ ಡಿ. ಶಾಸ್ತ್ರಿ, ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್‌ ಅಧ್ಯಕ್ಷ ಎಚ್.ಎಸ್.ಮಂಜುನಾಥ ಕುರ್ಕಿ, ಕಾರ್ಮಿಕ ಮುಖಂಡರಾದ ಎಚ್.ಕೆ.ರಾಮಚಂದ್ರಪ್ಪ, ಅವರಗೆರೆ ಎಚ್.ಜಿ.ಉಮೇಶ್, ತಾಲೂಕು ಕನ್ನಡ ಸಾಹಿತ್ಯ ಪರಿಷತ್‌ ಅಧ್ಯಕ್ಷ ಬಿ.ವಾಮದೇವಪ್ಪ, ದಾವಣಗೆರೆ ಜಿಲ್ಲಾ ಬ್ಯಾಂಕ್‌ ನೌಕರರ ಸಂಘದ ಅಧ್ಯಕ್ಷ ಬಿ.ಆನಂದ ಮೂರ್ತಿ, ಪ್ರಧಾನ ಕಾರ್ಯದರ್ಶಿ ಕೆ.ರಾಘವೇಂದ್ರ ನಾಯರಿ, ಸಾಹಿತ್ಯ ಪರಿಷತ್ತಿನ ಕಾರ್ಯದರ್ಶಿ ಬಿ.ದಿಳ್ಯೆಪ್ಪ, ಎ.ಆರ್‍.ಉಜ್ಜನಪ್ಪ, ಅಜಿತ್ ಕುಮಾರ್‍ ಇದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.