ADVERTISEMENT

ಪೌಷ್ಟಿಕ ಆಹಾರ ಉತ್ಪಾದನಾ ಕೇಂದ್ರಕ್ಕೆ ಜಿಲ್ಲಾಧಿಕಾರಿ ಭೇಟಿ

​ಪ್ರಜಾವಾಣಿ ವಾರ್ತೆ
Published 9 ಸೆಪ್ಟೆಂಬರ್ 2019, 14:54 IST
Last Updated 9 ಸೆಪ್ಟೆಂಬರ್ 2019, 14:54 IST
ದಾವಣಗೆರೆ ತಾಲ್ಲೂಕು ಮಹಿಳಾ ಪೂರಕ ಪೌಷ್ಟಿಕ ಆಹಾರ ಉತ್ಪಾದನಾ ಮತ್ತು ತರಬೇತಿ ಸಂಸ್ಥೆಗೆ (ಎಂಎಸ್‌ ಪಿಟಿಸಿ) ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಸೋಮವಾರ ದಿಢೀರ್‌ ಭೇಟಿ ನೀಡಿ ಪರಿಶೀಲಿಸಿದರು
ದಾವಣಗೆರೆ ತಾಲ್ಲೂಕು ಮಹಿಳಾ ಪೂರಕ ಪೌಷ್ಟಿಕ ಆಹಾರ ಉತ್ಪಾದನಾ ಮತ್ತು ತರಬೇತಿ ಸಂಸ್ಥೆಗೆ (ಎಂಎಸ್‌ ಪಿಟಿಸಿ) ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಸೋಮವಾರ ದಿಢೀರ್‌ ಭೇಟಿ ನೀಡಿ ಪರಿಶೀಲಿಸಿದರು   

ದಾವಣಗೆರೆ: ತಾಲ್ಲೂಕು ಮಹಿಳಾ ಪೂರಕ ಪೌಷ್ಟಿಕ ಆಹಾರ ಉತ್ಪಾದನಾ ಮತ್ತು ತರಬೇತಿ ಸಂಸ್ಥೆಗೆ (ಎಂಎಸ್‌ ಪಿಟಿಸಿ) ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಸೋಮವಾರ ದಿಢೀರ್‌ ಭೇಟಿ ನೀಡಿ ಅಂಗನವಾಡಿಗಳಿಗೆ ಸರಬರಾಜು ಆಗುವ ಆಹಾರ ಪದಾರ್ಥಗಳನ್ನು ಪರಿಶೀಲಿಸಿದರು.

ಮಕ್ಕಳಿಗೆ ಪೌಷ್ಟಿಕ ಆಹಾರ ತಯಾರಿಸುವ ರವೆ ಕಳಪೆ ಗುಣಮಟ್ಟದ್ದಾಗಿರುವುದನ್ನು ಜಿಲ್ಲಾಧಿಕಾರಿ ಗಮನಿಸಿದರು. ಇನ್ನು ಮುಂದೆ ಈ ರೀತಿಯ ಕಳಪೆ ರವೆ ಸರಬರಾಜು ಮಾಡದಂತೆ ಸಂಸ್ಥೆಯ ಮುಖ್ಯಸ್ಥರಿಗೆ ಎಚ್ಚರಿಕೆ ನೀಡರು. ಇಂತಹ ಆಹಾರ ಸರಬರಾಜು ಮಾಡಿದರೆ ಬಿಲ್ಲು ಪಾವತಿಯನ್ನು ತಡೆಹಿಡಿಯಲಾಗುವುದು ಎಂದು ತಿಳಿಸಿದರು.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ವಿಜಯಕುಮಾರ್, ಸಿಡಿಪಿಒ ವೀಣಾ, ಎಂಎಸ್ ಪಿಟಿಸಿ ಸಿಬ್ಬಂದಿ ಇದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.