ADVERTISEMENT

ಸೇವಾಲಾಲ್ ಜಯಂತಿ | ನೂರು ಜನ ಸೇರಿಸಿ ಬಿಜೆಪಿ ರಾಜಕೀಯ: ಡಿ.ಕೆ.ಶಿವಕುಮಾರ್

​ಪ್ರಜಾವಾಣಿ ವಾರ್ತೆ
Published 14 ಫೆಬ್ರುವರಿ 2026, 13:33 IST
Last Updated 14 ಫೆಬ್ರುವರಿ 2026, 13:33 IST
<div class="paragraphs"><p>ಡಿ.ಕೆ.ಶಿವಕುಮಾರ್</p></div>

ಡಿ.ಕೆ.ಶಿವಕುಮಾರ್

   

ಸುರಗೊಂಡನಕೊಪ್ಪ (ದಾವಣಗೆರೆ): ಪರಿಶಿಷ್ಟ ಜಾತಿಗೆ ನಿಗದಿಯಾದ ಮೀಸಲಾತಿಯನ್ನು ವೈಜ್ಞಾನಿಕವಾಗಿ ಹಂಚಿಕೆ ಮಾಡಿ ಎಲ್ಲರಿಗೂ ನ್ಯಾಯ ಕೊಡಲಾಗಿದೆ. ಇದರಿಂದ ಬಿಜೆಪಿ ನಾಯಕರಿಗೆ ಅಸ್ತಿತ್ವದ ಪ್ರಶ್ನೆ ಎದುರಾಗಿದ್ದು, ನೂರು ಜನರನ್ನು ಸೇರಿಸಿ ರಾಜಕೀಯ ಮಾಡಿದ್ದಾರೆ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಕಿಡಿಕಾರಿದರು.

ವೇದಿಕೆ ಕಾರ್ಯಕ್ರಮ ಮುಗಿಸಿ ಬೆಂಗಳೂರಿಗೆ ತೆರಳುತ್ತಿದ್ದ ಅವರು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದರು.

ADVERTISEMENT

‘ಇದು ರಾಜಕೀಯ ವೇದಿಕೆ ಅಲ್ಲ. ಬಂಜಾರ ಸಮುದಾಯವನ್ನು ಪರಿಶಿಷ್ಟ ಸಮುದಾಯಕ್ಕೆ ಸೇರಿಸಿದ್ದು ಕಾಂಗ್ರೆಸ್. ಸಮುದಾಯದಲ್ಲಿ ಶೇ 90ರಷ್ಟು ಜನರು ಒಳ್ಳೆಯವರು. ನಮ್ಮೊಂದಿಗೆ ಇದ್ದಾರೆ’ ಎಂದರು.

ದೆಹಲಿ ಪ್ರವಾಸದ ಕುರಿತು ಕೇಳಿದ ಪ್ರಶ್ನೆಗೆ ಮುಗುಳ್ನಕ್ಕ ಡಿ.ಕೆ.ಶಿವಕುಮಾರ್, ‘ಕಾಲವೇ ಉತ್ತರ ಕೊಡುತ್ತದೆ’ ಎಂದು ಪ್ರತಿಕ್ರಿಯಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.