ADVERTISEMENT

ರಾಯಣ್ಣನ ಜಯಂತಿಗೆ ರಜೆ ಬೇಡ: ಕಾಗಿನೆಲೆ ಶ್ರೀ

​ಪ್ರಜಾವಾಣಿ ವಾರ್ತೆ
Published 19 ಆಗಸ್ಟ್ 2018, 20:08 IST
Last Updated 19 ಆಗಸ್ಟ್ 2018, 20:08 IST
ಹರಪನಹಳ್ಳಿ ತಾಲ್ಲೂಕಿನ ಹಲುವಾಗಲು ಗ್ರಾಮದಲ್ಲಿ ಸಂಗೊಳ್ಳಿ ರಾಯಣ್ಣ ಪ್ರತಿಮೆಯನ್ನು ಕಾಗಿನೆಲೆ ಕನಕ ಗುರುಪೀಠದ ನಿರಂಜನಾನಂದಪುರಿ ಸ್ವಾಮಿ ಅನಾವರಣಗೊಳಿಸಿದರು
ಹರಪನಹಳ್ಳಿ ತಾಲ್ಲೂಕಿನ ಹಲುವಾಗಲು ಗ್ರಾಮದಲ್ಲಿ ಸಂಗೊಳ್ಳಿ ರಾಯಣ್ಣ ಪ್ರತಿಮೆಯನ್ನು ಕಾಗಿನೆಲೆ ಕನಕ ಗುರುಪೀಠದ ನಿರಂಜನಾನಂದಪುರಿ ಸ್ವಾಮಿ ಅನಾವರಣಗೊಳಿಸಿದರು   

ಹರಪನಹಳ್ಳಿ: ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನ ಜನ್ಮ ದಿನೋತ್ಸವದಂದು ಎಲ್ಲ ಸರ್ಕಾರಿ ಕಚೇರಿಗಳಲ್ಲಿ ರಾಯಣ್ಣನ ಭಾವಚಿತ್ರ ಪೂಜಿಸುವಂತೆ ಆದೇಶಿಸಬೇಕು. ರಾಯಣ್ಣನ ಜಯಂತಿಗೆ ರಜೆ ಕೊಡುವ ಅಗತ್ಯವಿಲ್ಲ ಎಂದು ಕಾಗಿನೆಲೆ ಕನಕ ಗುರುಪೀಠದ ನಿರಂಜನಾನಂದ ಪುರಿ ಸ್ವಾಮೀಜಿ ಸರ್ಕಾರವನ್ನು ಒತ್ತಾಯಿಸಿದರು.

ತಾಲ್ಲೂಕಿನ ಹಲವಾಗಲು ಗ್ರಾಮದಲ್ಲಿ ಸಂಗೊಳ್ಳಿ ರಾಯಣ್ಣ ಅಭಿಮಾನ ಬಳಗದಿಂದ ಭಾನುವಾರ ಆಯೋಜಿಸಿದ್ದ ಸಮಾರಂಭದಲ್ಲಿ ಸಂಗೊಳ್ಳಿ ರಾಯಣ್ಣ ಪ್ರತಿಮೆ ಅನಾವರಣಗೊಳಿಸಿ ಅವರು ಮಾತನಾಡಿದರು.

‘ಸಂಗೊಳ್ಳಿ ರಾಯಣ್ಣ ಒಂದು ಜಾತಿಗೆ ಸೀಮಿತರಾದವರಲ್ಲ. ಆಚರಣೆ ನೆಪದಲ್ಲಿ ಬಟ್ಟೆಗಳ ಮೇಲೆ ಬರೆದುಕೊಳ್ಳುವ ಹೇಳಿಕೆಗಳು ಇನ್ನೊಂದು ಸಮಾಜವನ್ನು ಕೆಣಕುವುದಾಗಲೀ, ನೋವುಂಟು ಮಾಡುವುದಾಗಲೀ ಸಲ್ಲದು. ದೇಶದ ಪ್ರತಿಯೊಬ್ಬರು ಸ್ವಾತಂತ್ರ್ಯ ಹೋರಾಟಗಾರರ ಆದರ್ಶ ಪಾಲಿಸಬೇಕು ಎಂದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.