ADVERTISEMENT

ಶಾಮನೂರು ಶಿವಶಂಕರಪ್ಪಗೆ ಶರಣಬಸವ ವಿ.ವಿಯ ಡಾಕ್ಟರೇಟ್

​ಪ್ರಜಾವಾಣಿ ವಾರ್ತೆ
Published 9 ಸೆಪ್ಟೆಂಬರ್ 2021, 3:36 IST
Last Updated 9 ಸೆಪ್ಟೆಂಬರ್ 2021, 3:36 IST
ಶಾಮನೂರು ಶಿವಶಂಕರಪ್ಪ
ಶಾಮನೂರು ಶಿವಶಂಕರಪ್ಪ   

ದಾವಣಗೆರೆ: ಅಖಿಲ ಭಾರತ ವೀರಶೈವ ಮಹಾಸಭಾದ ಅಧ್ಯಕ್ಷ, ಶಾಸಕ ಶಾಮನೂರು ಶಿವಶಂಕರಪ್ಪ ಅವರಿಗೆ ಕಲಬುರಗಿಯ ಶರಣಬಸವ ವಿಶ್ವವಿದ್ಯಾಲಯದಿಂದ ಗೌರವ ಡಾಕ್ಟರೇಟ್ ನೀಡಲಾಗಿದೆ.

‘ಸೆಪ್ಟೆಂಬರ್ 10ರಂದು ಶರಣ ಬಸವ ವಿಶ್ವವಿದ್ಯಾಲಯದಲ್ಲಿ ನಡೆಯುವ ಸರಳ ಸಮಾರಂಭದಲ್ಲಿ ವಿಶ್ವವಿದ್ಯಾಲಯದ ಕುಲಾಧಿಪತಿ ಶರಣಬಸವಪ್ಪ ಅಪ್ಪಾ ಗೌರವ ಡಾಕ್ಟರೇಟ್ ನೀಡಿ ಗೌರವಿಸಲಿದ್ದಾರೆ.

ಶಾಮನೂರು ಶಿವಶಂಕರಪ್ಪ ಶಿಕ್ಷಣ, ಸಮಾಜ ಸೇವೆಯನ್ನು ಗುರುತಿಸಿ ವಿಶ್ವವಿದ್ಯಾಲಯದ ಪ್ರಥಮ ಮತ್ತು ದ್ವಿತೀಯ ಘಟಿಕೋತ್ಸವದಲ್ಲಿ ಈ ಪದವಿ ನೀಡಲು ಜುಲೈ 30ರಂದು ನಡೆದ ವಿಶ್ವವಿದ್ಯಾಲಯದ ಸಿಂಡಿಕೇಟ್ ಸದಸ್ಯರ ಸಭೆಯಲ್ಲಿ ತೀರ್ಮಾನಿಸಲಾಗಿತ್ತು.

ADVERTISEMENT

ಘಟಿಕೋತ್ಸವದ ಸಮಾರಂಭವು ಯೂಟ್ಯೂಬ್ ಮೂಲಕ ನೇರ ಪ್ರಸಾರವಾಗಲಿದೆ ಎಂದು ವಿಶ್ವವಿದ್ಯಾಲಯದ ಉಪ ಕುಲಪತಿ ನಿರಂಜನ್ ವಿ. ನಿಷ್ಟಿ ತಿಳಿಸಿದ್ದಾರೆ.

ಶಿವಶಂಕರಪ್ಪ ಅವರಿಗೆ 2008ರಲ್ಲಿ ಕುವೆಂಪು ವಿಶ್ವವಿದ್ಯಾಲಯ, 2013ರಲ್ಲಿ ದಾವಣಗೆರೆ ವಿಶ್ವವಿದ್ಯಾಲಯ ಗೌರವ ಡಾಕ್ಟರೇಟ್ ನೀಡಿ ಗೌರವಿಸಿದ್ದವು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.