ADVERTISEMENT

ದಾವಣಗೆರೆ | ಸಾಕು ನಾಯಿಗಳ ದಾಳಿ: ಮಹಿಳೆ ಸಾವು

​ಪ್ರಜಾವಾಣಿ ವಾರ್ತೆ
Published 5 ಡಿಸೆಂಬರ್ 2025, 19:18 IST
Last Updated 5 ಡಿಸೆಂಬರ್ 2025, 19:18 IST
<div class="paragraphs"><p>ಅನಿತಾ</p></div>

ಅನಿತಾ

   

ದಾವಣಗೆರೆ: ತಾಲ್ಲೂಕಿನ ಹೊನ್ನೂರು ಗೊಲ್ಲರಹಟ್ಟಿ ಸಮೀಪ ವ್ಯಕ್ತಿಯೊಬ್ಬರು ಬಿಟ್ಟು ಹೋಗಿದ್ದ ಎರಡು ಸಾಕು ನಾಯಿಗಳು ದಾಳಿ ನಡೆಸಿ, ತೀವ್ರ ಗಾಯ ಗೊಂಡಿದ್ದ ಮಹಿಳೆ ಶುಕ್ರವಾರ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.

ಗ್ರಾಮದ ಅನಿತಾ (38) ಮೃತಪಟ್ಟವರು. ತೀವ್ರ ಗಾಯಗೊಂಡಿದ್ದ ಇವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಹೆಚ್ಚಿನ ಚಿಕಿತ್ಸೆಗೆ ಬೆಂಗಳೂರಿಗೆ ಕರೆದೊಯ್ಯುವಾಗ ಮೃತಪಟ್ಟಿದ್ದಾರೆ ಎಂದು ಪೊಲೀಸರು
ತಿಳಿಸಿದ್ದಾರೆ. ರಾಷ್ಟ್ರೀಯ ಹೆದ್ದಾರಿಯಿಂದ ಗ್ರಾಮದತ್ತ ಗುರುವಾರ ರಾತ್ರಿ ಕಾಲ್ನಡಿಗೆಯಲ್ಲಿ ತೆರಳುತ್ತಿದ್ದ ಮಹಿಳೆಯ ಮೇಲೆ ಎರಡು ನಾಯಿಗಳು ದಾಳಿ ನಡೆಸಿವೆ. ತಲೆ, ಮುಖ, ಕೈ–ಕಾಲು ಸೇರಿದಂತೆ ದೇಹದ ಹಲವೆಡೆ ಕಚ್ಚಿವೆ. ರಾಟ್‌ವೈಲರ್‌ ತಳಿಯ ಎರಡು ನಾಯಿಗಳನ್ನು ಗ್ರಾಮಸ್ಥರು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ.

ADVERTISEMENT

ನಾಯಿಗಳನ್ನು ವ್ಯಕ್ತಿಯೊಬ್ಬರು ನಿರ್ಜನ ಪ್ರದೇಶದಲ್ಲಿ ಬಿಟ್ಟು ಹೋಗಿದ್ದರು ಎನ್ನಲಾಗಿದೆ. ಈ ಸಂಬಂಧ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಅನುಮಾನಾಸ್ಪದ ಸಾವು ಪ್ರಕರಣ ದಾಖಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.