ADVERTISEMENT

ದಾವಣಗೆರೆ: ನ್ಯಾಯಾಲಯದಲ್ಲಿ ಲಸಿಕಾ ಉತ್ಸವಕ್ಕೆ ಚಾಲನೆ

​ಪ್ರಜಾವಾಣಿ ವಾರ್ತೆ
Published 16 ಏಪ್ರಿಲ್ 2021, 5:34 IST
Last Updated 16 ಏಪ್ರಿಲ್ 2021, 5:34 IST
ದಾವಣಗೆರೆ ಜಿಲ್ಲಾ ನ್ಯಾಯಾಲಯ ಸಂಕೀರ್ಣದಲ್ಲಿ ಗುರುವಾರ ಲಸಿಕಾ ಉತ್ಸವ ಅಭಿಯಾನ ಆರಂಭಗೊಂಡಿತು
ದಾವಣಗೆರೆ ಜಿಲ್ಲಾ ನ್ಯಾಯಾಲಯ ಸಂಕೀರ್ಣದಲ್ಲಿ ಗುರುವಾರ ಲಸಿಕಾ ಉತ್ಸವ ಅಭಿಯಾನ ಆರಂಭಗೊಂಡಿತು   

ದಾವಣಗೆರೆ: ಕೋವಿಡ್ ಎರಡನೇ ಅಲೆ ಹರಡುವುದನ್ನು ಪರಿಣಾಮಕಾರಿಯಾಗಿ ತಡೆಯುವ ನಿಟ್ಟಿನಲ್ಲಿ ಜಿಲ್ಲೆಯ 45 ವರ್ಷ ದಾಟಿದ ಎಲ್ಲ ವಕೀಲರಿಗೆ ಏ. 15ರಿಂದ 3 ದಿನಗಳ ಕಾಲ ಲಸಿಕಾ ಅಭಿಯಾನವನ್ನು ಹಮ್ಮಿಕೊಳ್ಳಲಾಗಿದೆ ಎಂದು ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್‌ ನ್ಯಾಯಾಧೀಶರಾದ ಕೆ.ಬಿ.ಗೀತಾ ಹೇಳಿದರು.

ಜಿಲ್ಲಾ ನ್ಯಾಯಾಲಯ, ಜಿಲ್ಲಾ ವಕೀಲರ ಸಂಘ, ಆರೋಗ್ಯ ಇಲಾಖೆಯ ಸಹಯೋಗದೊಂದಿಗೆ ಗುರುವಾರ ಜಿಲ್ಲಾ ನ್ಯಾಯಾಲಯ ಸಂಕೀರ್ಣದಲ್ಲಿ ಏರ್ಪಡಿಸಿದ ಲಸಿಕಾ ಉತ್ಸವ ಅಭಿಯಾನದಲ್ಲಿ ಅವರು ಮಾತನಾಡಿದರು.

ನ್ಯಾಯಾಲಯದ ಸಿಬ್ಬಂದಿ ಜಿಲ್ಲಾ ಚಿಗಟೇರಿ ಆಸ್ಪತ್ರೆಯಲ್ಲಿ ಲಸಿಕೆ ಪಡೆದಿದ್ದಾರೆ. ಲಸಿಕೆ ಪಡೆಯದ ಸಿಬ್ಬಂದಿ, ವಕೀಲರು ಲಸಿಕೆ ಹಾಕಿಸಿಕೊಳ್ಳಬೇಕು ಎಂದು ತಿಳಿಸಿದರು.

ADVERTISEMENT

ಡಿಎಚ್‌ಒ ಡಾ. ನಾಗರಾಜ್, ‘3 ದಿನಗಳ ಅಭಿಯಾನದಲ್ಲಿ ಪ್ರತಿದಿನ 100 ಜನರಂತೆ ಒಟ್ಟು 300 ಜನರಿಗೆ ಲಸಿಕೆ ನೀಡುವ ಗುರಿ ಹೊಂದಲಾಗಿದೆ. ಕೋವ್ಯಾಕ್ಸಿನ್ ಲಸಿಕೆ ತೆಗೆದುಕೊಂಡವರಿಗೆ 2ನೇ ಡೋಸ್ 4 ವಾರದ ಬಳಿಕ ಹಾಕಲಾಗುತ್ತದೆ. ಕೋವಿಶೀಲ್ಡ್ ಲಸಿಕೆ ಹಾಕಿಸಿಕೊಂಡವರಿಗೆ ಮೊದಲ ಡೋಸ್ ಪಡೆದ 6 ವಾರದ ನಂತರ 2ನೇ ಡೋಸ್ ನೀಡಲಾಗುತ್ತದೆ’ ಎಂದು ಮಾಹಿತಿ ನೀಡಿದರು. ವಕೀಲರ ಸಂಘದ ಮಾಜಿ ಅಧ್ಯಕ್ಷ ಎನ್.ಟಿ.ಮಂಜುನಾಥ್, ವಕೀಲರಾದ ಅನ್ನಪೂರ್ಣಮ್ಮ, ಎಸ್.ಆರ್.ಚಂದ್ರಶೇಖರ್, ರಮೇಶ್, ಸಿಬ್ಬಂದಿ ಲಸಿಕೆ ಪಡೆದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.